7:46 AM Friday28 - November 2025
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ…

ಇತ್ತೀಚಿನ ಸುದ್ದಿ

Terror Attack | ಪ್ರವಾಸಿಗರ ಸುರಕ್ಷಿತ ರವಾನೆಗೆ ಟಿಕೆಟ್ ದರ ಹೆಚ್ಚಿಸದಿರಲು ಏರ್ ಲೈನ್ಸ್ ಕಂಪನಿಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೂಚನೆ

23/04/2025, 16:18

*ವಿಮಾನಯಾನ ಸಚಿವರೊಂದಿಗೂ ಚರ್ಚೆ; ವಿಮಾನಯಾನ ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ
* ಕಾಶ್ಮೀರದ ಭಯೋತ್ಪಾದನಾ ಸ್ಥಳದಿಂದ ಕನ್ನಡಿಗರು ಸೇರಿ ಪ್ರವಾಸಿಗರ ಸುರಕ್ಷಿತ ರವಾನೆಗೆ ಅಗತ್ಯ ಕ್ರಮ

ನವದೆಹಲಿ(reporterkarnataka.com): ಕಾಶ್ಮೀರದ ಪಹಲ್ಗಾಮ್ ನಿಂದ ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ವೈಮಾನಿಕ ಕಂಪನಿಗಳು ಏರ್ ಲೈನ್ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಈಗಾಗಲೇ ಕಾಶ್ಮೀರದ ಪ್ರವಾಸಿ ತಾಣಗಳಿಂದ ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗುತ್ತಿದೆ. ಮೃತರ ಶವಗಳನ್ನು ತರಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
*ಟಿಕೆಟ್ ದರ ಹೆಚ್ಚಿಸದಿರಲು ಸೂಚನೆ:*
ಭಯೋತ್ಪಾದನಾ ಕೃತ್ಯ ನಡೆದ ಸ್ಥಳದಿಂದ ಹಾಗೂ ಕಾಶ್ಮೀರದ ಇತರೆ ಪ್ರವಾಸಿ ತಾಣಗಳಿಂದ ಪ್ರವಾಸಿಗರ ರಕ್ಷಣಾ ಕಾರ್ಯ ನಡೆದಿದೆ. ಪ್ರವಾಸಿಗರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಹೆಚ್ಚಿನ ಟಿಕೆಟ್ ದರ ವಿಧಿಸದಿರುವಂತೆ ವೈಮಾನಿಕ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

*ವಿಮಾನಯಾನ ಸಚಿವರೊಂದಿಗೆ ಚರ್ಚೆ:*
ಏರ್ ಲೈನ್ ಟಿಕೆಟ್ ದರ ಹೆಚ್ಚಳ ಮಾಡದಂತೆ ನಾಗರೀಕ ವಿಮಾನಯಾನ ಸಚಿವರೊಂದಿಗೂ ಮಾತನಾಡಿದ್ದೇನೆ. ಏರ್ ಲೈನ್ ಟಿಕೆಟ್ ದರದ ಕುರಿತು ಗಮನಹರಿಸಲು ಡಿಜಿಸಿಎಗೂ ಸೂಚನೆ ನೀಡಿದ್ದೇನೆ ಎಂದು ಸಚಿವ ಜೋಶಿ ತಿಳಿಸಿದರು.

*ಕನ್ನಡಿಗರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ:* ಕಾಶ್ಮೀರದ ಪ್ರವಾಸಿ ತಾಣಗಳಿಂದ ಕನ್ನಡಿಗರು ಸೇರಿದಂತೆ ಪ್ರವಾಸಿಗರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತಿದ್ದಾರೆ ಎಂದು ಜೋಶಿ ತಿಳಿಸಿದರು.

*ಶಾಂತಿ ನೆಲೆಸಲು ಕಟ್ಟು ನಿಟ್ಟಿನ ಕ್ರಮ:*
ಜಮ್ಮು-ಕಾಶ್ಮೀರದಲ್ಲಿ 2019ರಿಂದ ಇತ್ತೀಚಿನ ವರ್ಷಗಳಲ್ಲಿ ಶಾಂತಿ ನೆಲೆಸಿದ್ದನ್ನು ಸಹಿಸದೆ ಹೇಡಿಗಳು ಇಂಥ ಹೇಯ ಕೃತ್ಯವೆಸಗಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆ ತಕ್ಕ ಉತ್ತರ ಕೊಡಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಜಮ್ಮು- ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುತ್ತಿದ್ದ ನಿರ್ಣಯ, ಕಾರ್ಯಗಳು ಯಶಸ್ವಿಗೊಳ್ಳುತ್ತಿರುವುದನ್ನು ಸಹಿಸಲಾಗದೆ ಭಯೋತ್ಪಾದಕರು ಹೀಗೆ ಪ್ರವಾಸಿಗರ ಮೇಲೆ ಹೇಡಿತನದ ಕೃತ್ಯ ಎಸಗಿದ್ದಾರೆ ಎಂದು ತೀವ್ರವಾಗಿ ಖಂಡಿಸಿದ ಸಚಿವ ಜೋಶಿ, ಈ ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆ ಹತ್ತಿಕ್ಕಲು ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಜರುಗಿಸಿ ಶಾಂತಿ ಸ್ಥಾಪನೆಗೆ ತ್ವರಿತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು