5:16 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ

23/04/2025, 20:01

ಮಂಗಳೂರು(reporterkarnataka.com): ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ರಾಜ್ಯ ಸರಕಾರ ಅನುಮೋದನೆ
ನೀಡಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿಯಲ್ಲಿ ನಡೆದ ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಒಪ್ಪಿಗೆ ನೀಡಿದರು.
*ಮುಖ್ಯಾಂಶಗಳು:*

* ರಾಜ್ಯದ ಬಂದರುಗಳು ಅಭಿವೃದ್ಧಿ, ಜಲಸಾರಿಗೆ ಯೋಜನೆಗಳ ಪ್ರಗತಿ, ಸರಕು ಸಾಗಣೆಗೆ ಅವಶ್ಯವಿರುವ ಮೂಲ ಸೌಲಭ್ಯಗಳ ಬಗ್ಗೆ ಸಮಿತಿಯಲ್ಲಿ ಚರ್ಚಿಸಲಾಯಿತು.

* ಮಂಗಳೂರಿನ ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್  ಮೆಟ್ರೋ ಯೋಜನೆ  ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದರು.

* ಸಾಗರಮಾಲಾ ಯೋಜನೆಯಡಿಯಲ್ಲಿ  ಮಂಗಳೂರಿನಲ್ಲಿ ಕರ್ನಾಟಕ ಜಲಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಮುಖ್ಯಮಂತ್ರಿಯವರು ಒಪ್ಪಿಗೆ ನೀಡಿದರು.

* ಪುನರ್ವಸತಿ, ಬಂದರು ಸಂಬಂಧಿತ ಕಾರ್ಯಾಚರಣೆಗಳಿಗೆ ಭೂಮಿ ಹಂಚಿಕೆ ಗುತ್ತಿಗೆ ಅವಧಿಯನ್ನು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದು ಜತೆಗೆ ಅತಿಕ್ರಮಣ ಮಾಡಿಕೊಂಡಿರುವವರನ್ನು ಕೂಡಲೇ ಎತ್ತಂಗಡಿ ಮಾಡುವಂತೆ ಸಿಎಂ ಸೂಚಿಸಿದರು.

* ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಡ್ರೋಣ್ ಸರ್ವೇ ಮಾಡಿಸಿ
ಇನ್ನು ಮೂರು ತಿಂಗಳ ಒಳಗಾಗಿ ವರದಿ ನೀಡುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

* ಆಂಧ್ರ ಪ್ರದೇಶ, ವಿಶಾಖಪಟ್ಟಣ, ಕೇರಳ, ತಮಿಳು ನಾಡು, ಗುಜರಾತ್ ಗಳಲ್ಲಿ ಬಂದರುಗಳು ಹೇಗೆ ಕಾರ್ಯನಿರ್ವ ಹಿಸುತ್ತಿವೆ ಎಂಬುದರ ಬಗ್ಗೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ
ಸೂಚನೆ ನೀಡಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಬಂದರು ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ, ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು