4:46 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಫಹಲ್ಗಾಮ್ ಘಟನೆ ಮಾನವ ಕುಲಕ್ಕೆ ಮಾರಕ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

23/04/2025, 21:05

ಮಂಗಳೂರು(reporterkarnataka.com): ಕಾಶ್ಮೀರದ ಫಹಲ್ಗಾಮ್‌ನಲ್ಲಿ ಉಗ್ರವಾದಿಗಳಿಂದ ನಡೆದ ಪ್ರವಾಸಿಗರ ಹತ್ಯೆಯ ಹೃದಯ ವಿದ್ರಾವಕ ಘಟನೆ ಇಡೀ ಮಾನವ ಕುಲಕೆ ಮಾರಕ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಪದ್ಮರಾಜ್ ಆರ್. ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
ನ್ಯಾಯ, ನೀತಿ ಮತ್ತು ಶಾಂತಿ ಬಯಸುವ ಸವಾಜದಲ್ಲಿ ಹಿಂಸೆಗೆ ಸ್ಥಾನ ಇರಬಾರದು. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜೀವ ನಷ್ಟವು ನಮ್ಮ ಸಾಮೂಹಿಕ ಆತ್ಮಸಾಕ್ಷಿಗೆ ಆದ ಗಾಯ. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಅವಾಯಕರ ಜೀವಗಳನ್ನು ಬಲಿಯಾಗಿಸಿ, ಅನೇಕ ಕುಟುಂಬಗಳನ್ನೇ ನಾಶ ಮಾಡಿರುವುದು ಹಿಂಸಾಚಾರವಷ್ಟೇ ಅಲ್ಲ. ಸಂಪೂರ್ಣ ಅವಾನವೀಯ ಕೃತ್ಯ. ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ಕೆಟ್ಟ ಬೆಳವಣಿಗೆ. ಈ ವಿಚಾರದಲ್ಲಿ ನಾವು ಪಕ್ಷ ಭೇದ ಮರೆತು ಕೇಂದ್ರ ಸರ್ಕಾರದ ಪರ ನಿಲ್ಲುತ್ತೇವೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಅವುಗಳನ್ನು ಬುಡಸಮೇತ ಕಿತ್ತೊಗೆಯುವ ಕೆಲಸವಾಗಬೇಕು. ಅಮಾಯಕರನ್ನು ಕೊಂದ ಉಗ್ರರಿಗೆ ಕೇಂದ್ರ ಸರ್ಕಾರ ತಕ್ಕ ಉತ್ತರ ನೀಡಬೇಕು. ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು. ಎಂದು ಈ ಮೂಲಕ ಆಗ್ರಹಿಸುತ್ತೇನೆ. ದುರ್ಘಟನೆಯಲ್ಲಿ ಮೃತರ ಕುಟುಂಬಗಳಿಗೆ ದುಃಖ ಸಹಿಸುವ ಶಕ್ತಿ ಸಿಗಲಿ. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಪದ್ಮರಾಜ್ ಪೂಜಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು