9:36 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

Chamarajanagara | ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಿ: ಗೃಹ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

24/04/2025, 15:40

ಚಾಮರಾಜನಗರ(reporterkarnataka.com):ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮಲೆ ಮಹದೇಶ್ವರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

*ಉಗ್ರರನ್ನು ಮಟ್ಟಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ:*
ನೆಲೆಸಿರುವ ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದರು.

*ಬಂದೋಬಸ್ತು ಸಡಿಲಗೊಳಿಸಬಾರದಿತ್ತು:*.
ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್ ಘಟನೆ ಅತ್ಯಂತ ಖಂಡನೀಯವಾದ ಹಾಗೂ ಅಮಾನುಷವಾದ ಘಟನೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತು ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎಂದು ಅವರು ನುಡಿದರು.

*ಉಗ್ರರನ್ನು ಹಾಕಲು ಎಲ್ಲ ಸಹಕಾರ:*
ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು. ಪುಲ್ವಾಮಾ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು. ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಉಗ್ರರು ಯಾವುದೇ ಧರ್ಮ ಜಾರಿಗೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಸರ್ಕಾರದ ಜವಾಬ್ದಾರಿ ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ ಪಕ್ಷ ಕೊಡುತ್ತದೆ ಎಂದು ಅವರು ತಿಳಿಸಿದರು.

*10 ಲಕ್ಷ ಪರಿಹಾರ:*
ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ಪೊಲೀಸ್ ಗೌರವದಿಂದ ಅಂತ್ಯಕ್ರಿಯೆ ನಡೆಯಲಿದೆ ಎಂದರು.

*ಕಾದು ನೋಡಿ:*
ಬಜೆಟ್ ನಲ್ಲಿ ಜಿಲ್ಲೆಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯ ನಂತರ ಮಾತನಾಡುವುದಾಗಿ ತಿಳಿಸಿದರು.

*ಕೇಂದ್ರ ಸರ್ಕಾರದ ರಾಜಕೀಯ ದ್ವೇಷ:*
ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಿದರೆ ತಕ್ಷಣವೇ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಬಗ್ಗೆ ಪ್ರಧಾನಿ ,ಗೃಹ ಸಚಿವರನ್ನು ಭೇಟಿ ಮಾಡಿದ್ದರೂ ಏನು ಆಗಿಲ್ಲ. ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಅನುದಾನವನ್ನು ಕೊಡುತ್ತಿಲ್ಲ. 2023-24 ರಲ್ಲಿ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5300 ಕೋಟಿ ಅನುದಾನವನ್ನು ಈವರೆಗೆ ಕೊಟ್ಟಿಲ್ಲ. ಇದು ರಾಜಕೀಯ ದ್ವೇಷದಂತೆ ಕಾಣುತ್ತದೆ ಎಂದು ಅವರು ನುಡಿದರು.

*ಚಾಮರಾಜನಗರ ಜಿಲ್ಲೆಯ ಪ್ರಮುಖ ಯೋಜನೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ:*
ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಹಾಗೂ ಚಾಮರಾಜನಗರ ಜಿಲ್ಲೆಗೆ ಅಗತ್ಯವಿರುವ ಪ್ರಮುಖ ಯೋಜನೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು