4:52 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಪಹಲ್ಗಾಮಿನಲ್ಲಿ ಉಗ್ರರ ದಾಳಿ: ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ, AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಖಂಡನೆ

24/04/2025, 20:12

ಮಂಗಳೂರು(reporterkarnataka.com): ಕಾಶ್ಮೀರದ ಪಹಲ್ಗಾಮಿನಲ್ಲಿ ಉಗ್ರರ ದಾಳಿಯನ್ನು ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ, AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಖಂಡಿಸಿದ್ದಾರೆ.
ಪಹಲ್ಗಾಮಿನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮೃತರಿಗೆ ಸಂತಾಪ ಸೂಚಿಸುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕಥೊಲಿಕ್ ಸಭಾ ಕೂಡ ಜೊತೆಗಿರಲಿದೆ. ಭಾರತದ ಪ್ರತಿ ಜನರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಭಯೋತ್ಪಾದನೆ ದಾಳಿ ಕ್ರೂರ ಅಪರಾಧ. ಇದಕ್ಕೆ ಯಾವುದೇ ಸಮರ್ಥನೆ ಇಲ್ಲ ಎಂದು ಅವರು ಹೇಳಿದ್ದಾರೆ.
ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಮೂಲಕ, ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿರ್ವಹಿಸಬೇಕು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಸಂದರ್ಭದಲ್ಲಿ ಮ್ರತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಭಗವಂತನು ಕೊಡಲಿ. ಅವರ ಅಕಾಲಿಕ ಮರಣ ಅವರ ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ.
ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಹಾಗೂ ಅಖಿಲ ಭಾರತ ಕ್ರೈಸ್ತ ಒಕ್ಕೂಟ ಇದನ್ನು ಖಂಡಿಸುತ್ತದೆ. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕರನ್ನು ಸದೆಬಡೆಯಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರು ಆಗಲಿ ಇವುಗಳನ್ನು ಬುಡ ಸಮೇತ ಕಿತ್ತೊಗೆಯಬೇಕು. ಆತ್ಮಗಳಿಗೆ ಶಾಂತಿ ಕೋರುತ್ತೇವೆ ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇವೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಹಾಗೂ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು