ಇತ್ತೀಚಿನ ಸುದ್ದಿ
ಮಂಗಳೂರು: ಸರಕಾರಿ ಬಸ್ ಕಂಡೆಕ್ಟರ್ ನಿಂದಲೇ ಯುವತಿಗೆ ಲೈಂಗಿಕ ಕಿರುಕುಳ!; ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್
24/04/2025, 22:22

ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com
ಕೆಎಸ್ಸಾರ್ಟಿಸಿಯ ನರ್ಮ್ ಬಸ್‌ನಲ್ಲಿ ಕಂಡಕ್ಟರೊಬ್ಬರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಖಾಸಗಿ ಅಂಗಕ್ಕೆ ಕೈಹಾಕಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಬಸ್ ಕಂಡೆಕ್ಟರ್ ನನ್ನು ಅಮಾನತುಗೊಳಿಸಲಾಗಿದೆ.
ಮುಡಿಪು ಕಡೆಗೆ ಸಾಗುವ ನರ್ಮ್ ಬಸ್ಸಿನಲ್ಲಿ ನಿದ್ರಿಸುತ್ತಾ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಪಕ್ಕದಲ್ಲೇ ಸೀಟಿಗೆ ಒರಗಿ ನಿಂತು ಕಂಡೆಕ್ಟರ್ ಪ್ರದೀಪ್ ಎಂಬಾತ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕುತ್ತಿದ್ದ. ಇದನ್ನು ಬಸ್ಸಿನಲ್ಲೇ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಮೊಬೈಲ್ ಮೂಲಕ ವೀಡಿಯೊ ಮಾಡಿದ್ದರು. ಆ ವೀಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು, ಎಚ್ಚೆತ್ತ ಮಂಗಳೂರು ಕೆಎಸ್ಆರ್ಟಿಸಿ ವಿಭಾಗದ ನಿಯಂತ್ರಣಾಧಿಕಾರಿ ಆರೋಪಿ ಕಂಡೆಕ್ಟರ್ ಪ್ರದೀಪ್ ಎಂಬಾತನನ್ನು ಅಮಾನತುಗೊಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.