5:55 PM Friday25 - April 2025
ಬ್ರೇಕಿಂಗ್ ನ್ಯೂಸ್
BBMP | ಸಾರ್ವಜನಿಕರಿಂದ ದೂರು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ: ಬಿಬಿಎಂಪಿಗೆ ಲೋಕಾಯುಕ್ತ… Chamarajanagara | ಸಂಪುಟ ಸದಸ್ಯರು ದೇವಾಲಯಕ್ಕೆ: ಸಚಿವ ಮಹದೇವಪ್ಪ ಬುಡಕಟ್ಟು ಸಮುದಾಯಗಳ ಕಾಲೋನಿಗಳಿಗೆ… 20 ಲಕ್ಷ ರೂ. ಲಂಚ ಸ್ವೀಕಾರ: ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಲೋಕಾಯುಕ್ತ… ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನಮುಕ್ತ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ Chamarajanagara | ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಿ: ಗೃಹ… ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ತಲಾ… ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯ: ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178… Bangalore | ಪೆಹಲ್ಗಾಮ್ ನರಮೇಧ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ… Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ… ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಸಹಕಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

ಇತ್ತೀಚಿನ ಸುದ್ದಿ

Chamarajanagara | ಸಂಪುಟ ಸದಸ್ಯರು ದೇವಾಲಯಕ್ಕೆ: ಸಚಿವ ಮಹದೇವಪ್ಪ ಬುಡಕಟ್ಟು ಸಮುದಾಯಗಳ ಕಾಲೋನಿಗಳಿಗೆ ಭೇಟಿ

25/04/2025, 11:28

ಮಲೆಮಹದೇಶ್ವರಬೆಟ್ಟ(reporterkarnataka.com): ನಾಡಿನ ಐತಿಹಾಸಿಕ ತಾಣವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯುತ್ತಿದ್ದು ಇಡೀ ಸರ್ಕಾರವೇ ಚಾಮರಾಜನಗರದ ಮಹದೇಶ್ವರ ಬೆಟ್ಟದಲ್ಲಿ ಬೀಡು ಬಿಟ್ಟಿದೆ.


ಸಹಜವಾಗಿ ಇಲ್ಲಿಗೆ ಆಗಮಿಸಿದ ಸಚಿವರೆಲ್ಲರೂ ಕೂಡಾ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆಯುವುದು ವಾಡಿಕೆ. ಇಂದು ಸಚಿವರೆಲ್ಲಾ ಒಬ್ಬೊಬ್ಬರಾಗಿ ಮಹದೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯುತ್ತಿರುವ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್. ಸಿ. ಮಹದೇವಪ್ಪನವರು ಇದಕ್ಕೆ ವಿಭಿನ್ನವಾಗಿ ಬೆಟ್ಟಕ್ಕೆ ಹತ್ತಿರ ಇರುವ ಬುಡಕಟ್ಟು ಸಮುದಾಯಗಳ ಜನತಾ ಕಾಲೋನಿಗೆ ಭೇಟಿ ನೀಡಿ, ಸಂಕಷ್ಟಗಳನ್ನು ಆಲಿಸುವ ಮೂಲಕ ಮಾದರಿ ಆಗಿದ್ದಾರೆ.
ಸುಮಾರು ಒಂದು ಗಂಟೆಯ ಕಾಲ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದ ಸಚಿವರು, ಜನತಾ ದೇವಾಲಯಕ್ಕೆ ತೆರಳಿ ಅವರನ್ನು ಆಲಿಸಿದ್ದು ಅತ್ಯಂತ ವಿಶೇಷವಾಗಿತ್ತು.
ಈ ಬಗ್ಗೆ ಮಾಧ್ಯಮ ಮಿತ್ರರು ಪ್ರಶ್ನೆ ಕೇಳಲಾಗಿ, ದೇವಸ್ಥಾನಕ್ಕಿಂತಲೂ ಜನರ ಬಳಿ ಹೋಗುವುದು ಹೆಚ್ಚು ಪೂರಕವಾದಂತ ಸಂಗತಿಯಾಗಿದ್ದು, ಜನರ ಮಾತುಗಳೇ ದೈವದ ಮಾತಾಗಿದೆ ಎಂದು ಹೇಳುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು