7:50 PM Thursday20 - November 2025
ಬ್ರೇಕಿಂಗ್ ನ್ಯೂಸ್
ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:…

ಇತ್ತೀಚಿನ ಸುದ್ದಿ

Puttur | ಏಪ್ರಿಲ್ 27: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ; ಸಾಮೂಹಿಕ ಕುಂಕುಮಾರ್ಚನೆ

25/04/2025, 18:47

ಪುತ್ತೂರು(reporterkarnataka.com): ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆ ಸಿಂಧೂರ, ಈ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ ಲೇಖಕಿ ಶೀಲಾ ಲಕ್ಷ್ಮೀ ಅವರು ಬರೆದ ಕೃತಿ ‘ಕುಂಕುಮ ಮಹತಿ’ ಯು ಏಪ್ರಿಲ್ 27 ಭಾನುವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯಲ್ಲಿರುವ ಅನ್ನಛತ್ರ ದಲ್ಲಿ ಬೆಳಗ್ಗೆ 9:30ಕ್ಕೆ ಲೋಕಾರ್ಪಣೆ ಗೊಳ್ಳಲಿದೆ.

ಬಳಿಕ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ, ಮುಳಿಯ ಪ್ರತಿಷ್ಠಾನ ಪುತ್ತೂರು ಸಹಯೋಗದಲ್ಲಿ , ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಕಾರದಲ್ಲಿ ನಡೆಯುವ ಕೃತಿ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ದೇವಾಲಯ ಸಂವರ್ಧನ ಸಮಿತಿಯ ವಿಭಾಗ ಪ್ರಮುಖ್ ಕೇಶವ ಪ್ರಸಾದ್ ಮುಳಿಯ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್, ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ ಪ್ರಮುಖ್ ಗಣೇಶ ಮಂಗಳೂರು ಅವರು ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಾವಯವ ಕುಂಕುಮದ ಅರಿವನ್ನುಂಟು ಮಾಡುವ ನೆಟ್ಟಿನಲ್ಲಿ, ಸಾವಯವ ಕುಂಕುಮ ಅನಾವರಣಗೊಳ್ಳಲಿದೆ.
ಕೃತಿ ಲೋಕಾರ್ಪಣೆಯ ಬಳಿಕ ಭಗವತ್ ಭಕ್ತ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಆಸಕ್ತ ಕುಮಾರಿಯರು, ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಗೂ ಕೃತಿ ಲೋಕಾರ್ಪಣಾ ಸಮಾರಂಭಕ್ಕೆ ಭಾಗಿಯಾಗಿ ದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ವಿನಂತಿ. ಕುಂಕುಮಾರ್ಚನೆಗೆ ಬೇಕಾದ ಸಾಹಿತ್ಯವನ್ನು ಸಂಘಟಕರೇ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು