9:10 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Kalladka | ಪಾಕಿಸ್ತಾನ ನಾಶವಾದರೆ ಮಾತ್ರ ಭಯೋತ್ಪಾದನೆ ನಿರ್ನಾಮ: ಪ್ರತಿಭಟನಾ ಸಭೆಯಲ್ಲಿ ಆರೆಸ್ಸೆಸ್ ನಾಯಕ ಡಾ.ಪ್ರಭಾಕರ ಭಟ್

25/04/2025, 20:31

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಭಯೋತ್ಪಾದನೆ ಜಾಗತಿಕ ಸಮಸ್ಯೆಯಾಗಿದ್ದು, ಅದರ ನಿರ್ಮೂಲನವಾಗಬೇಕಾದರೆ ಭಯೋತ್ಪಾದಕರನ್ನು ಸೃಷ್ಟಿ ಸುವ ಪಾಕಿಸ್ಥಾನದ ನಾಶವಾದರೆ ಮಾತ್ರ ಸಾಧ್ಯ ವಾದೀತು ಎಂದು ಆರೆಸ್ಸೆಸ್ ನಾಯಕ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಕಲ್ಲಡ್ಕದಲ್ಲಿ ಜಮ್ಮು ಕಾಶ್ಮೀರದ ಪಹಲ್ಗಾಮ್ ನಡೆದ ಹಿಂದುಗಳ ಹತ್ಯೆಯ ವಿರುದ್ಧ ಏರ್ಪಡಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಹಿಂದುಗಳ ಮೇಲೆ ಹಲವು ಶತಮಾನಗಳಿಂದಲೂ ಮುಸಲ್ಮಾನರಿಂದ ಹಲವು ರೀತಿಯ ದೌರ್ಜನ್ಯಗಳು ನಡೆಯುತ್ತಲೇ ಬಂದಿದೆ. ಸಮಾಜ ಎಲ್ಲವನ್ನೂ ಸಹಿಸಿಕೊಂಡು ಬಂದಿದೆ. ಸಾಮರಸ್ಯಕ್ಕೆ ಪ್ರಯತ್ನಿಸಿದೆ. ಆದರೆ ಹಿಂದುಗಳನ್ನು ನಾಶಮಾಡುವ ಷಡ್ಯಂತ್ರ ನಿರಂತರ ಆಗುತ್ತಲೇ ಇದೆ. ಹಿಂದೂ ಎಂದೂ ಅನ್ಯ ಮತೀಯರ ಮೇಲೆ ಆಕ್ರಮಣ ಮಾಡಿದ ಉದಾಹರಣೆಗಳೇ ಇಲ್ಲ. ಆದರೂ ಹಿಂದುಗಳನ್ನು ದ್ವೇಷಿಸುವ ಹಾಗೂ ದೂಷಿಸುವ ಸರಕಾರ ಹಿಂದುಗಳಿಗೆ ರಕ್ಷಣೆ ನೀಡುತ್ತಿಲ್ಲ. ಮುಸಲ್ಮಾನರ ಓಲೈಕೆ ರಾಜಕಾರಣ ಮಾಡುತ್ತಿದೆ.


ಭಯೋತ್ಪಾದರಿಗೆ ರಕ್ಷಣೆ ನೀಡುತ್ತಿದೆ ಎಂದರು.
ಸಂಘದ ನೂರು ವರ್ಷಗಳ ಶ್ರಮದ ಫಲವಾಗಿ ಹಿಂದು ಸಮಾಜ ಇಂದು ಜಾಗೃತವಾಗಿದೆ. ಈಗ ಭಯೋತ್ಪಾದಕರನ್ನು ಎದುರಿಸಲು ಸಜ್ಜಾಗಿದೆ,ಜಾಗೃತವಾಗಿದೆ ಎಂದು ಗುಡುಗಿದರು.
ವೇದಿಕೆಯಲ್ಲಿ ಹಿಂದೂ ಜಾಗರಣ ವೇದಿಕೆಯ ರಾಧಾಕೃಷ್ಣ ಅಡ್ಯಂತಾಯ ಮಾತನಾಡಿದರು. ಭಾರತದೊಳಗಿರುವ ಭಯೋತ್ಪಾದಕರನ್ನು ಮಟ್ಟ ಹಾಕುವುದಕ್ಕೆ ಹಿಂದೂ ಸಮಾಜ ಸನ್ನದ್ದವಾಗಬೇಕಾಗಿದೆ. ಭಯೋತ್ಪಾದಕರಿಗೆ ಬೆಂಬಲ ನೀಡುವ ದೇಶದ್ರೋಹಿಗಳಿಗೆ ತಕ್ಕ ಪಾಠ ಕಲಿಸಬೇಕಾಗಿದೆ. ಇದಕ್ಕೆ ಹಿಂದುಗಳು ಎಲ್ಲಾ ಭೇದಗಳನ್ನು ಬದಿಗಿಟ್ಟು ಒಗ್ಗಟ್ಟಾಗಬೇಕಾಗಿದೆ. ಸಂಘಟಿತ ಶಕ್ತಿಯಿಂದ ಮಾತ್ರ ದುಷ್ಟರನ್ನು ನಿಗ್ರಹಿಸಲು ಸಾಧ್ಯ ಎಂದರು.
ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಮಹಾಬಲ ರೈ ಬೋಳಂತೂರು, ಜಿನರಾಜ ಕೋಟ್ಯಾನ್, ಲಖಿತಾ ಆರ್ .ಶೆಟ್ಟಿ, ಮೋನಪ್ಪ ದೇವಸ್ಯ, ದಿನೇಶ್ ಅಮ್ಟೂರು, ಸುಲೋಚನಾ ಜಿಕೆ ಭಟ್, ನಾಗೇಶ್ ಕಲ್ಲಡ್ಕ, ಸುಜಿತ್ ಕಲ್ಲಡ್ಕ, ಕ.ಕೃಷ್ಣಪ್ಪ ಸೇರಿದಂತೆ ಬಿಜೆಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ, ವಿದ್ಯಾರ್ಥಿ ಪರಿಷತ್, ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಿದ್ದರು.
ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಸ್ವಾಗತಿಸಿ, ಭಜರಂಗ ದಳದ ಗೋಪಾಲ್ ನಿರೂಪಿಸಿ , ವಿದ್ಯಾರ್ಥಿ ಪರಿಷತ್ತಿನ ಸ್ವಾತಿ ಲಕ್ಷ್ಮೀ ವಂದಿಸಿದರು. ಮಧ್ಯಾಹ್ನ ಮೂರು ಗಂಟೆಯಿಂದ ಅಂಗಡಿ , ಹೊಟೇಲು ಹಾಗೂ ಇತರ ವ್ಯವಹಾರಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು