ಇತ್ತೀಚಿನ ಸುದ್ದಿ
Mangaluru | ಕಣಚೂರು ಸಂಸ್ಥೆಯಿಂದ ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಪಿಆರ್ ಮತ್ತು ಪ್ರಥಮ ಚಿಕಿತ್ಸೆ ತರಬೇತಿ
25/04/2025, 21:30

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ ಸಂಸ್ಥೆಯಿಂದ ಸಿಪಿಆರ್ (ಕಾರ್ಡಿಯೊ ಪಲ್ಮನರಿ ರಿಸಸಿಟೇಶನ್) ಮತ್ತು ಪ್ರಥಮ ಚಿಕಿತ್ಸೆಯ ತರಬೇತಿಯನ್ನು ನೀಡಲಾಯಿತು.
ಕೌಶಲ್ಯ ಸಬಲೀಕರಣದ ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಪಿ. ಎಲ್. ಧರ್ಮ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜಯರಾಜ್ ಅಮೀನ್ ಉಪಸ್ಥಿತರಿದ್ದರು. ಕಣಚೂರು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಮೋನಿಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು, ಮೆಡಿಸಿನ್ ವಿಭಾಗದ ಡಾ. ಶ್ರೀನಿವಾಸ್ ಮತ್ತು ಡಾ. ಉಬೈದುಲ್ಲಾ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.