3:16 AM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

Mangaluru | ಕಾಶ್ಮೀರ ಹುತಾತ್ಮ ಪ್ರವಾಸಿಗರಿಗೆ ಕಾಂಗ್ರೆಸ್ ಮೊಂಬತ್ತಿ ಹಚ್ಚಿ ಶ್ರದ್ಧಾಂಜಲಿ

25/04/2025, 21:37

ಮಂಗಳೂರು(reporterkarnataka.com): ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ಭೀಕರ ದಾಳಿಯನ್ನು ಖಂಡಿಸಿ ಮತ್ತು ಹುತಾತ್ಮರಾದವರಿಗೆ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಶುಕ್ರವಾರ ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸಲಾಯಿತು.


ಬಳಿಕ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಅಮಾಯಕರ ಮೇಲೆ ಭಯೋತ್ಪಾದಕರು ಅತ್ಯಂತ ಅಮಾನುಷವಾಗಿ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯ. ಇಂತಹ ಕೃತ್ಯದಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯುಂಟಾಗಿದೆ. ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕು. ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ, ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನುಡಿನಮನ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ, ಭಾರತದ ಏಕತೆಯನ್ನು ಸಹಿಸದ ಪಾಕಿಸ್ತಾನ ಕಾಶ್ಮೀರದ ಪ್ರವಾಸಿಗರ ಮೇಲೆ ಘನಘೋರ ಕೃತ್ಯ ಎಸಗಿದೆ. ಭಯೋತ್ಪಾದನೆಗೆ ಜಾತಿ-ಧರ್ಮವಿಲ್ಲ. ದೇಶದಲ್ಲಿ ಭಯೋತ್ಪಾದಕ ಕೃತ್ಯಗಳು ನಿಲ್ಲಬೇಕು ಮತ್ತು ಅಮಾಯಕ‌ ಜೀವಗಳು ಬಲಿಯಾಗುವುದನ್ನು ತಡೆಯಬೇಕು. ಈ ನಿಟ್ಟಿನಲ್ಲಿ ಭಯೋತ್ಪಾದಕರ ಹೇಯ ಕೃತ್ಯದ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದರು.
ಈ ಸಂದರ್ಭ ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೊ ಮಾತನಾಡಿದರು. ಮಾಜಿ ಮೇಯರಾದ ಶಶಿಧರ್ ಹೆಗ್ಡೆ, ಭಾಸ್ಕರ್.ಕೆ, ಮುಖಂಡರಾದ ಅಬ್ದುಲ್ ರವೂಫ್, ಕೆ.ಪಿ.ಥೋಮಸ್, ಪಿಯೂಸ್ ರೋಡ್ರಿಗಸ್, ಅಶ್ರಫ್.ಕೆ, ಕೆ.ಅಪ್ಪಿ, ಪ್ರವೀಣ್ ಚಂದ್ರ ಆಳ್ವ, ನವೀನ್ ಡಿಸೋಜಾ, ಟಿ.ಹೊನ್ನಯ್ಯ, ನೀರಜ್ ಚಂದ್ರಪಾಲ್, ಟಿ.ಕೆ.ಸುಧೀರ್, ವಿಕಾಶ್ ಶೆಟ್ಟಿ, ಬೇಬಿ ಕುಂದರ್, ಶುಭೋದಯ ಆಳ್ವ, ಅಶ್ರಫ್ ಬಜಾಲ್, ಜೋಕಿಂ ಡಿಸೋಜಾ, ವಿಶ್ವಾಸ್ ಕುಮಾರ್ ದಾಸ್, ಗಿರೀಶ್ ಶೆಟ್ಟಿ, ಯು.ಟಿ.ಫರ್ಝಾನ, ಬಾಲಕೃಷ್ಣ ಅಂಚನ್, ಕೇಶವ ಮರೋಳಿ, ಅಬ್ಬಾಸ್ ಅಲಿ, ಶಂಸುದ್ದೀನ್ ಕುದ್ರೋಳಿ, ಶಂಸುದ್ದೀನ್ ಬಂದರ್, ಪದ್ಮನಾಭ ಅಮೀನ, ನಿತ್ಯಾನಂದ ಶೆಟ್ಟಿ, ಜೀತೇಂದ್ರ ಸುವರ್ಣ, ಹೇಮಂತ್ ಗರೋಡಿ, ರಮಾನಂದ ಪೂಜಾರಿ, ಗೀತಾ ಅತ್ತಾವರ, ಫಾರೂಕ್ ಬಯಾಬೆ, ಜಾರ್ಜ್, ಶಶಿಕಲಾ ಪದ್ಮನಾಭ, ಶಕುಂತಲಾ ಕಾಮತ್, ಶಾಂತಲಾ ಗಟ್ಟಿ, ದುರ್ಗಾ ಪ್ರಸಾದ್, ಸಮರ್ಥ್ ಭಟ್, ನೆಲ್ಸನ್ ಮೊಂತೆರೋ, ಆಲ್ವಿನ್ ಪ್ರಕಾಶ್ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು