11:01 PM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

Sports News | ಟೋಕಿಯೋ ಪ್ಯಾರಲಿಂಪಿಕ್ಸ್‌ ಹೈಜಂಪ್‌ನಲ್ಲಿ ಬೆಳ್ಳಿ ಗೆದ್ದ ನಿಶಾದ್ ಕುಮಾರ್

29/08/2021, 21:44

ಟೊಕಿಯೊ(Reporterkarnataka.com)

ಭಾರತದ ನಿಶಾದ್ ಕುಮಾರ್ ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಪುರುಷರ ವಿಭಾಗದ ಹೈಜಂಪ್, ಟಿ46/47ನಲ್ಲಿ ಬೆಳ್ಳಿ ಗೆದ್ದಿದ್ದಾರೆ.

2.06 ಮೀಟರ್ ಗಳಷ್ಟು ಜಿಗಿಯುವ ಮೂಲಕ ನಿಶಾದ್ ಕುಮಾರ್ ತಮ್ಮದೇ ಏಷ್ಯನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಭಾರತದ ಮತ್ತೋರ್ವ ಕ್ರೀಡಾಪಟು ರಾಮ್ ಪಾಲ್ 5 ನೇ ಸ್ಥಾನ ಪಡೆದಿದ್ದಾರೆ. ಅವರು 1.94 ಮೀಟರ್ ಜಿಗಿದಿದ್ದಾರೆ.
ಅಮೆರಿಕಾದ ಡಲ್ಲಾಸ್ ವೈಸ್ (ಟಿ46) 2.06 ಮೀಟರ್ (ನಿಶಾದ್ ಕುಮಾರ್ ಅವರ ಸಮ) ಜಿಗಿದಿದ್ದು ರಜತ ಪದಕವನ್ನು ನಿಶಾದ್ ಜತೆ ಹಂಚಿಕೊಂಡಿದ್ದಾರೆ.

ಅಮೆರಿಕದ ಮತ್ತೋರ್ವ ಕ್ರೀಡಾಪಟು ರೋಡೆರಿಕ್ ಟೌನ್ಸೆಂಡ್ 2.15 ಮೀಟರ್ ಜಿಗಿದಿದ್ದು ದಾಖಲೆ ನಿರ್ಮಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಫೈನಲ್ ನಲ್ಲಿ ನಿಶಾದ್ ಕುಮಾರ್ 1.89 ರಿಂದ ಜಿಗಿತ ಪ್ರಾರಂಭಿಸಿ ಹಾದಿ ಸುಗಮಗೊಳಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು