4:04 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

Karnataka CM | ರಾಜ್ಯದಲ್ಲಿರುವ ಪಾಕ್ ಪ್ರಜೆಗಳ ವಾಪಸ್ ಕಳಿಸಲು ಕ್ರಮ: ಮುಖ್ಯಮಂತ್ರಿ ಘೋಷಣೆ

26/04/2025, 20:02

ಮೈಸೂರು(reporterkarnataka.com): ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆ ಹಾಕಿ,ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.

*ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು:*
ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು.ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದರು.

*ನಾವು ಯುದ್ಧದ ಪರ ಇಲ್ಲ:*

ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದರು.

*ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ:*

ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಮಹತ್ವಯುತ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು.
ಚಾಮರಾಜನಗರಕ್ಕೆ 20 ಬಾರಿ ಮುಖ್ಯಮಂತ್ರಿಯಾಗಿ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಚಾಮರಾಜನಗರಕ್ಕೆ ಮೊದಲ ಬಾರಿ ಭೇಟಿ ನೀಡಿದಾಗಲೇ, ಅಲ್ಲಿಗೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆಂಬ ಕಳಂಕ ತೊಡೆದುಹೋಯಿತು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು