6:48 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Belagavi | ಉಗ್ರರ ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

27/04/2025, 11:13

ಬೆಳಗಾವಿ(reporterkarnataka.com): ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಅದಕ್ಕೆ ಬೆಂಬಲ ನೀಡಲಾಗುವುದು ಎಂದರು.
ಉಗ್ರರನ್ನು ಮಟ್ಟಹಾಕುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ನಮ್ಮ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಉಗ್ರರನ್ನು ಮಟ್ಟಹಾಕುವುದೇ ನಮ್ಮೆಲ್ಲರ ಉದ್ದೇಶವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ವಂಚಿಸುತ್ತಿರುವುದು ನನ್ನ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಖುದ್ದು ನಾನೇ ದೂರು ನೀಡಿದ್ದೇನೆ ಎಂದು ಸಚಿವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು