7:53 PM Friday4 - July 2025
ಬ್ರೇಕಿಂಗ್ ನ್ಯೂಸ್
Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಬಣಕಲ್ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರ ಜತೆ ಜನಸಂಪರ್ಕ ಸಭೆ

28/04/2025, 21:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಪಟ್ಟಣದ ತರುವೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರ ಜೊತೆ ಜನಸಂಪರ್ಕ ಸಭೆ ನಡೆಯಿತು.
ಸಭೆಯಲ್ಲಿ ಮೂಡಿಗೆರೆ ವೃತ್ತ ನಿರೀಕ್ಷಕ ರಾಜಶೇಖರ್ ಅವರು ಮಾತನಾಡುತ್ತಾ, “ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಯಾವುದೇ ಸಮಸ್ಯೆ ಎದುರಾದರೆ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು,” ಎಂದರು. ಜೊತೆಗೆ, ಹೊಸದಾಗಿ ಜಾರಿಗೆ ಬಂದಿರುವ ಬಿಎನ್ಎಸ್ (ಭದ್ರತಾ ಕ್ರಮ) ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಅಪರಾಧ ತಡೆಯಲು ಸಾರ್ವಜನಿಕರ ಸಹಕಾರ ಅತ್ಯವಶ್ಯಕ ಎಂದು ಹೇಳಿದರು.
ಬಣಕಲ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಅವರು ಮಾತನಾಡಿ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಕುರಿತು ಜಾಗೃತಿ ಮೂಡಿಸಿದರು. ಸುತ್ತಮುತ್ತಲ ಶಾಲಾ ಕಟ್ಟಡಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಶಾಲಾ ಕ್ಷೇಮಾಭಿವೃದ್ಧಿ ಸಮಿತಿಗೆ ಸೂಚನೆ ನೀಡಿದರು.
ಸಾಮಾಜಿಕ ಜಾಲತಾಣಗಳ ದುರುಪಯೋಗ ಕುರಿತು ಎಚ್ಚರಿಕೆ ನೀಡುತ್ತಾ, “ಸಮಾಜಿಕ ಏಕತೆಯನ್ನು ಹಾಳುಮಾಡುವ ಸಂದೇಶಗಳನ್ನು ಹರಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು. ಮಕ್ಕಳ ರಕ್ಷಣೆ ಸಂಬಂಧಿತ ಪೋಕ್ಸೋ ಕಾಯ್ದೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
“ತೋಟಗಳಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯದ ಕಾರ್ಮಿಕರ ಬಗ್ಗೆ ನಿಖರ ಮಾಹಿತಿ ಇಟ್ಟುಕೊಳ್ಳಬೇಕು” ಎಂದು ತೋಟದ ಮಾಲೀಕರಿಗೆ ಸಲಹೆ ನೀಡಿದರು.
“ಚಿಕ್ಕಮಗಳೂರು-ಮೂಡಿಗೆರೆ ಭಾಗ ಪ್ರವಾಸಿಗರ ನಾಡಾಗಿದ್ದು, ಹೆಚ್ಚಿನ ಪ್ರವಾಸಿಗರು ಕೊಟ್ಟಿಗೆಹಾರಕ್ಕೆ ಬಂದು ಹೋಟೆಲ್‌ಗಳಲ್ಲಿ ಆಹಾರ ಪದಾರ್ಥ ಗಳನ್ನು ತಿನ್ನುತ್ತಾರೆ, ಹೀಗಾಗಿ ಆಹಾರದ ಗುಣಮಟ್ಟ ಕಾಪಾಡಿ, ಅಂಗಡಿ–ಹೋಟೆಲ್‌ಗಳ ಮುಂದೆ ಸ್ವಚ್ಛತೆ ಕಾಪಾಡಿ, ಕಸ ಹಾಕದಂತೆ ಜಾಗರೂಕರಾಗಿ ವರ್ತಿಸಬೇಕು ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಶೀಲಾ, ಸದಸ್ಯರುಗಳಾದ ಸತೀಶ್ ಗೌಡ, ಸ್ಮಿತಾ, ವರ್ತಕರ ಸಂಘದ ಅಧ್ಯಕ್ಷ ಟಿ.ಎಮ್. ಗಜೇಂದ್ರ ಗೌಡ, ಸಮಾಜ ಸೇವಕ ಸಂಜಯ್ ಗೌಡ, ಆಟೋ ಸಂಘದ ಅಧ್ಯಕ್ಷ ರಮೇಶ್, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕಾರು ಮತ್ತು ಆಟೋ ಮಾಲೀಕರು ಹಾಗೂ ಚಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು