8:34 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Mangaluru | ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

30/04/2025, 10:44

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಮಂದಿರ (ರಿ.) ಮಾಡೂರು ಹಾಗೂ ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರದ ಜಂಟಿ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆಯ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ದಂತ ತಪಾಸಣೆ ಮತ್ತು ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಮಾತೃಶ್ರೀ ಕಾಂಪ್ಲೆಕ್ಸ್, ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಶ್ರೀ ವನದುರ್ಗಾ ಅಯ್ಯಪ್ಪ ಭಜನಾ ಮಂದಿರದ ಗುರುಸ್ವಾಮಿಯಾದ ಭಾಸ್ಕರ್ ಅವರು ಉದ್ಘಾಟಿಸಿದರು.
ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇಲ್ಲಿನ ವೈದ್ಯರಾದ ಡಾ| ಪ್ರಮಾದ ಪ್ರಭಾಕರ್ ಮಾತನಾಡಿ “ಸಮಾಜದ ಎಲ್ಲಾ ಜನರು ಉದ್ಯೋಗದ ಜೊತೆ ತಮ್ಮ ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಬೇಕು. ಈ ಶಿಬಿರದಲ್ಲಿ ದಂತ ತಪಾಸಣೆ, ಹುಳುಕು ಹಲ್ಲುಗಳ ಭರ್ತಿ, ಶುಚಿಗೊಳಿಸುವುದು, ಕೀಳುವುದು ಮತ್ತು ಹಲ್ಲುಗಳ ತಪಾಸಣೆ ಮಾಡಿಸಿ, ಅಗತ್ಯವಿದ್ದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯ ಹಸಿರು ಕಾರ್ಡನ್ನು ವಿತರಿಸಲಾಗುವುದು. ಶಿಬಿರಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ. ಅವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಸಾಮಾಜಿಕ ಕಳಕಳಿ ದೃಷ್ಠಿಯಿಂದ ಶಾಖೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ವೈದ್ಯಕೀಯ ಶಿಬಿರವನ್ನು ಮಾಡೂರು ಶಾಖೆಯ ಆವರಣದಲ್ಲಿ ನಡೆಸಿಕೊಂಡು ಬರುತ್ತಿದೆ. ಹಲ್ಲುಗಳ ಸುರಕ್ಷತೆಯ ಬಗ್ಗೆ ಜಾಗ್ರತೆ ವಹಿಸಿ ಚಿಕಿತ್ಸೆ ಪಡೆಯಬೇಕು. ಶಿಬಿರಾರ್ಥಿಗಳು ಈ ಶಿಬಿರದ ಸದುಪಯೋಗವನ್ನು ಪಡೆಯಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ ೧೩ ವರ್ಷಗಳಿಂದ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ವೈದ್ಯಕೀಯ ಶಿಬಿರವನ್ನು ನಿರಂತರ ಏರ್ಪಡಿಸುತ್ತಿದ್ದು, ವಿವಿಧ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಶಿಬಿರಗಳನ್ನು ಏರ್ಪಡಿಸಿಕೊಂಡು ಬರುತ್ತಾ ಇದ್ದೇವೆ. ಈ ವರ್ಷವು ಪರಿಸರದ ಜನರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದ್ದು, ಎಲ್ಲಾ ಜನರು ಇದರ ಸದುಪಯೋಗವನ್ನು ಪಡೆದುಕೊಂಡು ಆರೋಗ್ಯಕರ ಸಮಾಜವನ್ನು ರೂಪಿಸುವಲ್ಲಿ ನಮ್ಮೊಂದಿಗೆ ಕೈ ಜೋಡಿಸಬೇಕು, ಸಂಘದ ೮೨ನೇ ಉಚಿತ ವೈದ್ಯಕೀಯ ಶಿಬಿರವು ಇದಾಗಿದ್ದು, ಮುಂದಿನ ಮೇ ತಿಂಗಳಲ್ಲಿ ತೊಕ್ಕೊಟ್ಟು ಹಾಗೂ ಉಳ್ಳಾಲದ ಪರಿಸರದಲ್ಲಿ ಶಿಬಿರವನ್ನು ಆಯೋಜಿಸಲಾಗುವುದೆಂದು ತಿಳಿಸಿದರು. ಸಂಘದಲ್ಲಿ ಈಗಾಗಲೇ ಸಂಘದ ಸದಸ್ಯರಿಗೆ ಹಬ್ಬದ ಕೊಡುಗೆಯಾಗಿ ೧೦೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. ೭೭೮೮/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುತ್ತಿದೆ. ಸಂಘದಲ್ಲಿ ಲಭ್ಯವಿರುವ ಇ-ಸ್ಟಾಂಪಿAಗ್ ಸೇವೆ, ವಿಮಾ ಸೇವೆ, ಭವಿಷ್ಯ ಸುರಕ್ಷಾ ಯೋಜನೆಯ ಜೊತೆಗೆ ಎಲ್ಲಾ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಅಧ್ಯಕ್ಷರಾದ ನವೀನ್ ಕಂಬ್ಲಕೋಡಿ, ಎ.ಜೆ. ಇನ್‌ಸ್ಟಿಟ್ಯೂಟ್ ಮತ್ತು ಮೆಡಿಕಲ್ ಸೈನ್ಸ್, ಮಂಗಳೂರು ಇಲ್ಲಿನ ವೈದ್ಯರಾದ ಡಾ| ಆಶೀಷ್, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇದರ ಪಿ.ಆರ್.ಓ ಆದ ಭರತ್ ಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಸುಮಾರು ೧೫೦ ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಸಂಘದ ಹಿರಿಯ ಶಾಖಾಧಿಕಾರಿಯಾದ ರವಿಕಲಾ ವಿಶ್ವನಾಥ್ ಸ್ವಾಗತಿಸಿ, ಹಿರಿಯ ಶಾಖಾಧಿಕಾರಿಯಾದ ಸೌಮ್ಯಲತಾ ವಂದಿಸಿದರು. ಮಾಡೂರು ಶಾಖೆಯ ಪ್ರಭಾರ ಶಾಖಾಧಿಕಾರಿ ಭವ್ಯ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು