4:18 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

NEET Exam | ಮೇ 4ರಂದು NEET 2025ರ ಪರೀಕ್ಷೆ: ರಾಜ್ಯದಲ್ಲಿ 381 ಎಕ್ಸಾಮ್ ಸೆಂಟರ್

30/04/2025, 14:54

ಬೆಂಗಳೂರು (reporterkarnataka.com): ರಾಷ್ಟ್ರದಾದ್ಯಂತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4ರಂದು ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಸುಮಾರು 1,49,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅವಕಾಶವಿರುತ್ತದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿರುವ ಐಡಿ/ಆಧಾರ್ ಕಾರ್ಡ್/ಪಾನ್ ಕಾರ್ಡ್/ಡಿ.ಎಲ್/ವೋಟರ್ ಐಡಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಐಡಿ ಜೊತೆ, ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಫೋಟೋಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹಾಜರಾಗಬೇಕು. ಬೆಳಿಗ್ಗೆ 11.00 ಗಂಟೆಯಿಂದ NTA ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದ ಸಂಬಂಧಪಟ್ಟ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಹಾಗೂ ನಿಯೋಜಿತ ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆಯನ್ನು ನಡೆಸಲಾಗುವುದು.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ವಯ ಮಾರ್ಗಸೂಚಿಯನ್ನು ಪಾಲಿಸಬೇಕು. ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ/ ದೊಡ್ಡ ಬಟನ್ ಗಳಿರುವ ಶರ್ಟ್ /ಪ್ಯಾಂಟ್/ಶೂ/ ಸಾಕ್ಸ್ / ಎತ್ತರದ ಚಪ್ಪಲಿಗಳು/ ಕಿವಿಯೋಲೆ/ಬಳೆ/ಸರ/ಕಾಲ್ಗೆಜ್ಜೆ/ಮೂಗುತಿ/ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಮತ್ತು ಧರಿಸುವಂತಿಲ್ಲ. ಪ್ರವೇಶಾತಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ನೇರವಾಗಿ ತೆರಳತಕ್ಕದ್ದು.
ಮಧ್ಯಾಹ್ನ 2.00ರಿಂದ ಸಂಜೆ 5.00 ಗಂಟೆಯವರೆಗೆ ಪರೀಕ್ಷೆಯು ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಂದು ಬಾರಿ ಬೆಲ್ ಮೂಲಕ ಸೂಚನೆ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ ಹಾಗೂ ತುರ್ತು ಸೇವೆಗಳ ನಿಯೋಜನೆ, ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ದಿವ್ಯಾಂಗರು /ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಿಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಆಗ್ನಿ ಶಾಮಕ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗಿರುತ್ತದೆ.
NTA ವತಿಯಿಂದ Frisking ಮತ್ತು JAMMER ಅಳವಡಿಸಲು, ಏಜೆನ್ಸಿರವರನ್ನು ನಿಯೋಜಿಸಿದ್ದು, ಪರೀಕ್ಷಾ ಕೇಂದ್ರಕ್ಕೆ, JAMMER ಅಳವಡಿಕೆ ಮತ್ತು Frisking ಮಾಡುತ್ತಿರುವ ಬಗೆ, ಪರೀಕ್ಷಾ ಕೇಂದ್ರದ ಮುಖ್ಯಸ್ವರು ಖಚಿತಪಡಿಸಿಕೊಳ್ಳಬೇಕು. ಪ್ರತಿ ಪದೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ನಿಯೋಜಿತ ಸಿಬ್ಬಂದಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೆ ಕ್ರಮವಹಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ/ಸಿಬ್ಬಂದಿಯನ್ನು ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು