ಇತ್ತೀಚಿನ ಸುದ್ದಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ: ಹೂವಿನಹಡಗಲಿ ತಾಲೂಕು ಅಧ್ಯಕ್ಷರಾಗಿ ವೀರೇಶ್ ಕಲ್ಮಠ ಆಯ್ಕೆ
30/04/2025, 19:27

ವಿಜಯನಗರ(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಹೂವಿನಹಡಗಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಹೂವಿನಹಡಗಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರ ಅನುಪಸ್ಥಿತಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ರಾಜ್ಯ ಕಾರ್ಯದರ್ಶಿ ಎಚ್. ಹನುಮಂತಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಮಡ್ಡಿ ಗೋಣಿಸ್ವಾಮಿ ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ಡಿ. ಪರಶುರಾಮಪ್ಪ ಅವರ ನೇತೃತ್ವದಲ್ಲಿ ಮಾಡಲಾಯಿತು.
ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವೀರೇಶ್ ಕಲ್ಮಠ ಅವರನ್ನು ಆಯ್ಕೆ ಮಾಡಲಾಯಿತು.