7:19 AM Saturday23 - August 2025
ಬ್ರೇಕಿಂಗ್ ನ್ಯೂಸ್
ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಇತ್ತೀಚಿನ ಸುದ್ದಿ

New Delhi | ಜನಗಣತಿಯೊಂದಿಗೆ ಜಾತಿ ಗಣತಿ; ಮೋದಿ ಅವರಿಂದ ದಿಟ್ಟ ನಿರ್ಧಾರ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

30/04/2025, 23:03

ನವದೆಹಲಿ(reporterkarnataka.com): ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ.
ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಮಂತ್ರಿಯವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು