3:01 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Kalladka | ನಿಟಿಲಾಪುರ ಸದಾಶಿವ ದೇವಸ್ಥಾನ: ಮೇ 2ರಿಂದ 4ರ ವರೆಗೆ ಅತಿಮಹಾರುದ್ರಯಾಗ

01/05/2025, 16:32

ಬಂಟ್ವಾಳ(reporterkarnataka.com):ಅತಿಮಹಾರುದ್ರಯಾಗ ಸಮಿತಿ ವತಿಯಿಂದ ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೇ 2ರಿಂದ ಮೇ 4 ರವರಗೆ ಅತಿಮಹಾರುದ್ರಯಾಗ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ತಿಳಿಸಿದ್ದಾರೆ.

ಅವರು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು.
ಈ ಯಾಗದ ಅಂಗವಾಗಿ ಚಾಂದ್ರಮಾನ ಯುಗಾದಿಯ ಸಂದರ್ಭದಲ್ಲಿ ದೀಪ ಪ್ರಜ್ವಲಿಸಿ ಪ್ರಾರಂಭವಾದ ಪಾರಾಯಣ ಎ. 29ರ ವರೆಗೆ 18158 ಪಾರಾಯಣಗಳು ಪೂರ್ತಿಯಾಗಿದೆ.
ವಾರಣಾಸಿಯ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯ, ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಾಡಿನ ಸಮಸ್ತ ಸಂಸ್ಥಾನದ‌ ಮಠಾಧೀಶರುಗಳ ದಿವ್ಯ ಉಪಸ್ಥಿತಿ, ವಿವಿಧ ಪುಣ್ಯ ಕ್ಷೇತ್ರಗಳ ಧರ್ಮಾಧಿಕಾರಿಗಳು , ಧರ್ಮದರ್ಶಿಗಳು, ಧಾರ್ಮಿಕ ಮುಖಂಡರುಗಳ ಸಹಭಾಗಿತ್ವದಲ್ಲಿ ಸಹಕಾರದಲ್ಲಿ ಲೋಕಲ್ಯಾಣಾರ್ಥವಾಗಿ ಅತಿಮಹಾರುದ್ರಯಾಗ ಸಂಕಲ್ಪದಂತೆ ನಡೆಯಲಿದೆ ಎಂದು ಅವರು ತಿಳಿಸಿದರು. ಸಾರ್ವಜನಿಕವಾಗಿಯೇ ಏರ್ಪಡಿಸುತ್ತಿರುವುದು ಯಾಗದ ವಿಶೇಷವಾಗಿದೆ ಎಂದು ಹೇಳಿದರು.
ಮೇ 2ರಂದು ಶತರುದ್ರಾಭಿಷೇಕ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೇ 3ರಂದು ಕ್ಷೇತ್ರಕ್ಕೆ ಕಲ್ಲಡ್ಕ ಪೇಟೆಯಿಂದ ಹಸಿರು ಹೊರೆಕಾಣಿಕೆ ಶೋಭಯಾತ್ರೆ ನಡೆಯಲಿದೆ.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಮೇ 4ರಂದು ಅತಿಮಹಾರುದ್ರಯಾಗ ನಡೆಯಲಿದ್ದು, ಸಂಜೆ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.
ಮೂರು ದಿನಗಳಲ್ಲಿ ಸಾವಿರಾರು ಭಕ್ತರು ಯಾಗದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸಚಿನ್ ರೈ ಮಾಣಿ, ಅಜಿತ್ ಕುಮಾರ್ ಬರಿಮಾರ್, ಗಣೇಶ್ ಶೆಟ್ಟಿ ಗೋಳ್ತಮಜಲು, ತೋಟ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಉಪಸ್ಥಿತರಿದ್ದರು. ಕಲ್ಲಡ್ಕದಿಂದ ನೆಟ್ಲ ಕ್ಷೇತ್ರಕ್ಕೆ ವಾಹನ ವ್ಯವಸ್ಥೆ ಮಾಡಲಾಗುವುದು. ಪ್ರತಿದಿನ ಸಹಸ್ರಾರು ಮಂದಿ ಬರುವ‌ ಭಕ್ತಾದಿಗಳಿಗೆ ಅನ್ನಸಂತರ್ಪಣೆ, ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು