4:47 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮಂಗಳೂರು ಬಂದ್: ವಾಹನ ಸಂಚಾರ ಸ್ಥಗಿತ: ಎಡಿಜಿಪಿ ಆಗಮನ; ಬಿಗಿ ಬಂದೋಬಸ್ತ್

02/05/2025, 10:27

ಮಂಗಳೂರು(reporterkarnataka.com): ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ದ.ಕ‌‌. ಜಿಲ್ಲೆಯ ಬಹುತೇಕ ಕಡೆ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಆಚರಿಸಲಾಯಿತು.
ಈ ಮಧ್ಯೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಆರ್. ಹಿತೇಂದ್ರ ಮಂಗಳೂರಿಗೆ ಆಗಮಿಸಿದ್ದಾರೆ.

ನಗರದಲ್ಲಿ ಖಾಸಗಿ ಬಸ್, ಆಟೋ, ಟ್ಯಾಕ್ಸಿ ರೋಡಿಗೆ ಇಳಿದಿಲ್ಲ. ಕೆಎಸ್ಸಾರ್ಟಿಸಿ ಬಸ್ ಸಂಚಾರ ಬೆಳಗ್ಗೆ ಆರಂಭವಾದರೂ ನಂತರ ನಿಲ್ಲಿಸಲಾಯಿತು. ಖಾಸಗಿ ವಾಹನಗಳು ಬೆರಳೆಣಿಕೆ ಸಂಖ್ಯೆಯಲ್ಲಿ ಓಡಾಟ ನಡೆಸುತ್ತಿದ್ದವು. ಹೊರ ಜಿಲ್ಲೆಗಳಿಂದ ಮಂಗಳೂರು ನಗರದೊಳಗೆ ಪ್ರವೇಶಿಸುವ ಕೆಎಸ್ಸಾರ್ಟಿಸಿ ಬಸ್ ಗಳನ್ನು ಪಡೀಲ್ ಬಳಿ ತಡೆಯಲಾಯಿತು. ಈ ಹಿನ್ನೆಲೆಯಲ್ಲಿ ನಂತರ ಬಂದ ಕೆಎಸ್ಸಾರ್ಟಿಸಿ ಬಸ್ ಗಳನ್ನು ಬಿ.ಸಿ. ರೋಡಿನಲ್ಲೇ ತಂಗಬೇಕಾಯಿತು.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು