ಇತ್ತೀಚಿನ ಸುದ್ದಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ 2ನೇ ಸ್ಥಾನ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶ್ಲಾಘನೆ
02/05/2025, 20:35

ಬೆಂಗಳೂರು(reporterkarnataka.com): ಉಡುಪಿ ಜಿಲ್ಲೆ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಎಂದಿನಂತೆ ಉತ್ತಮ ಸಾಧನೆ ಮಾಡಿದ್ದು, ಜಿಲ್ಲೆಯ ಮಕ್ಕಳ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ.
ಶೇಕಡ 89.96 ಫಲಿತಾಂಶ ಜಿಲ್ಲೆಗೆ ಲಭಿಸಿದ್ದು, ಈ ಸಾಧನೆಗೆ ಕಾರಣರಾದ ಜಿಲ್ಲಾಡಳಿತ, ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರನ್ನು ಅಭಿನಂದಿಸುತ್ತೇನೆ. ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಇದೀಗ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲೂ ಉತ್ತಮ ಸಾಧನೆ ಮಾಡಿದೆ ಎಂದು ಹೇಳಿದ್ದಾರೆ.
ಈ ಪರೀಕ್ಷೆಯಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.