ಇತ್ತೀಚಿನ ಸುದ್ದಿ
ಮಂಡ್ಯ ಕೃಷ್ಣರಾಜ ಜಲಾಶಯದ ಆವರಣದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣ: ಕಾವೇರಿ ಆರತಿ
03/05/2025, 18:15

ಬೆಂಗಳೂರು(reporterkarnataka.com):
ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜ ಜಲಾಶಯದ ಆವರಣದಲ್ಲಿರುವ ಬೃಂದಾವನ ಉದ್ಯಾನವನದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮ ನಡೆಸುವ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಶಾಸಕಾದ ರವಿ ಗಾಣಿಗ, ದಿನೇಶ್ ಗೂಳಿಗೌಡ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಉಪ ಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಜೇಂದ್ರ ಚೋಳನ್, ತಾಂತ್ರಿಕ ಸಲಹೆಗಾರ ಜೈಪ್ರಕಾಶ್ ಮತ್ತಿತರರು ಭಾಗವಹಿಸಿದ್ದರು.