6:42 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Chikkamagaluru | ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ಬಿಗಿ ಭದ್ರತೆ: ಕಟ್ಟುನಿಟ್ಟಿನ ವಾಹನ ತಪಾಸಣೆ

03/05/2025, 21:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ(reporterkarnataka.com): ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮರ್ಡರ್‌ನ ನಂತರ ರಾಜ್ಯದಲ್ಲಿ ಭದ್ರತಾ ಕ್ರಮಗಳು ತೀವ್ರಗೊಂಡಿದ್ದು, ಚಿಕ್ಕಮಗಳೂರು ಗಡಿಭಾಗವಾದ ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಜಾರಿಯಲ್ಲಿದೆ.
ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಗಡಿಭಾಗದ ಪ್ರಮುಖ ಪ್ರವೇಶ ಬಾಗಿಲಾದ ಕೊಟ್ಟಿಗೆಹಾರದಲ್ಲಿ ಇದೀಗ ಪ್ರತಿಯೊಂದು ವಾಹನದ ತಪಾಸಣೆ ನಡೆಸಲಾಗುತ್ತಿದೆ. ಗಸ್ತು ಕಾರ್ಯಾಚರಣೆ ಹೆಚ್ಚಳಗೊಂಡಿದ್ದು, ಶಂಕಿತ ವಾಹನಗಳು ಹಾಗೂ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗುತ್ತಿದೆ.

ಬಣಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ತಪಾಸಣಾ ಚಟುವಟಿಕೆ ಗಡಿಭಾಗದ ಶಾಂತಿಯುತ ಪರಿಸರವನ್ನು ಕಾಪಾಡಲು ಉದ್ದೇಶಿತವಾಗಿದೆ. “ನಮ್ಮ ಗಡಿಭಾಗವು ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಮಾದರಿ ಆಗಬೇಕು. ಯಾವುದೇ ಬಾಹ್ಯ ಅಶಾಂತಿ ಜಿಲ್ಲೆಗೆ ಪ್ರವೇಶಿಸದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ,” ಎಂದು ಅವರು ತಿಳಿಸಿದ್ದಾರೆ.
ಈ ಕ್ರಮದ ಭಾಗವಾಗಿ ಸಾರ್ವಜನಿಕರನ್ನು ಸಹ ಸಹಕಾರ ನೀಡುವಂತೆ ಪೊಲೀಸರು ವಿನಂತಿಸಿದ್ದಾರೆ. ಜಿಲ್ಲೆಯ ಶಾಂತಿಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು