4:08 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಂಟ್ವಾಳ ವಕೀಲರ ಸಂಘ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರಾಯ್ಕೆ: ದಯಾನಂದ ರೈ ಉಪಾಧ್ಯಕ್ಷ

04/05/2025, 14:03

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ವಕೀಲರ ಸಂಘದ 2025-27ನೇ ಸಾಲಿನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರಾಯ್ಕೆಗೊಂಡಿದ್ದಾರೆ.
ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ
ಚುನಾವಣೆ ಶನಿವಾರ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿ ರಿಚರ್ಡ್ ಕೋಸ್ತಾ ಎಂ. ಸ್ಪರ್ಧೆ ಮಾಡಿ ಬಹುಮತದಿಂದ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರಧಾನ ಕಾರ್ಯದರ್ಶಿಯಾಗಿ ಕೆ. ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರ ಚನಾವಣೆಗಾಗಿ 244 ಅರ್ಹ ಮತದಾರರ ಪಟ್ಟಿಯಲ್ಲಿ 222 ಮತಗಳು ಚಲಾವಣೆ ಯಾಗಿದ್ದು ರಿಚರ್ಡ್ ಕೋಸ್ತಾ ಎಂ. ಅವರು 123 ಮತಗಳನ್ನು ಪಡೆದು ಜಯ ಗಳಿಸಿರುತ್ತಾರೆ. ಪ್ರತಿಸ್ಪರ್ಧಿಯಾಗಿ ಪೈಪೋಟಿ ನೀಡಿದ ರಾಜೇಶ್ ಬೊಳ್ಳುಕಲ್ಲು 95 ಮತಗಳನ್ನು ಪಡೆಯಲು ಸಮರ್ಥರಾದರು. ವಕೀಲರಾದ ಎಚ್. ಸತೀಶ್ ರಾವ್ ಅವರು ಮುಖ್ಯ ಚುನಾವಣಾಧಿಕಾರಿಯಾಗಿದ್ದರು ಕೆ. ವಿ. ಭಟ್ ಮತ್ತು ಎಂ. ವಿ. ಭಟ್ ಉಪ ಚುನಾವಣಾಧಿಕಾರಿಗಳಾಗಿ, ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯರ ಮೇಲುಸ್ತುವಾರಿಯಾಗಿ ಚುನಾವಣಾ ಪ್ರಕ್ರಿಯೆ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು