4:03 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

Congress | ಕೋಮು ವೈಷಮ್ಯದಿಂದ ಮಂಗಳೂರಿನ ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ: ಮಂಜುನಾಥ ಭಂಡಾರಿ ಖೇದ

05/05/2025, 15:51

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯ, ಘರ್ಷಣೆಯಿಂದಾಗಿ ಮಂಗಳೂರಿನ ಮಾನ ಮರ್ಯಾದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ ಎಂದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಖೇದ ವ್ಯಕ್ತಪಡಿಸಿದರು.
ನಗರದ ಮಲ್ಲಿಕಟ್ಟೆಯ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ಅವರು, ಈ ಹಿಂದೆ ಪಬ್ ದಾಳಿ, ಚರ್ಚ್ ದಾಳಿ, ಬರ್ತ್ ಡೇ ಪಾರ್ಟಿ ದಾಳಿಯಿಂದ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆಯಾಗಿದೆ. ಮಂಗಳೂರು ಬದಲಾವಣೆಯತ್ತ ತೆರೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಇಂತಹ ಘಟನೆಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಮಾರಕವಾಗಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೌಡಿಶೀಟರ್ ಗಳನ್ನು ಕೊಂದರೆ ಬಿಜೆಪಿಯವರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ. ಕೊಲೆ, ಕೊಲೆಯತ್ನ ದರೋಡೆಯಲ್ಲಿ ಭಾಗಿಯಾದ ರೌಡಿಗಳು ಜೈಲಿನಿಂದ ಬಿಡುಗಡೆಯಾಗುವಾಗ ಹಾರ ತುರಾಯಿ ಹಾಕಿ ಸ್ವಾಗತಿಸುತ್ತಾರೆ. ಒಂದು ವೇಳೆ ವೈಯಕ್ತಿಕ ವೈಷಮ್ಯಕ್ಕೆ ಅಥವಾ ವಿರೋಧಿ ರೌಡಿ ಪಡೆಯಿಂದ ಸಾವಿಗೀಡಾದರೆ ಅವರನ್ನು ಹಿಂದೂ ನಾಯಕ, ಮಹಾನ್ ದೇಶಭಕ್ತ ಎಂಬಂತೆ ಬಿಂಬಿಸುವುದೇಕೆ? ಎಂದು ಮಂಜುನಾಥ ಭಂಡಾರಿ ಪ್ರಶ್ನಿಸಿದರು.
ಕೆಲವು ತಿಂಗಳ ಹಿಂದೆ ಬಂಟ್ವಾಳದಲ್ಲಿ ಬಾಲಕನೊಬ್ಬ ನಾಪತ್ತೆಯಾದಾಗ ಅದರಲ್ಲಿ ಅನ್ಯಕೋಮಿನ ಕೈವಾಡ ಎಂದು ಬಿಜೆಪಿಯ ಹಿರಿಕಿರಿಯ ನಾಯಕರೆಲ್ಲರೂ ಮನೆಗೆ ಭೇಟಿ ಕೊಟ್ಟು ಪ್ರಕಾರಣದ ದಿಕ್ಕು ತಪ್ಪಿಸಲು ಯತ್ನಿಸಿ ವಿಫಲರಾದರು. ನಾಪತ್ತೆಯಾದ ಬಾಲಕ ವಾಪಸ್ ಮನೆಗೆ ಬಂದಾಗ ಇವರ್ಯಾರು ಕೂಡಾ ಇರಲಿಲ್ಲ. ಈಗ ರೌಡಿಯ ಕೊಲೆ ಪ್ರಕರಣ ಮುಂದಿಟ್ಟು ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಕೆಡಿಸಲು ಮುಂದಾಗಿದ್ದಾರೆ. ಇವರು ತಮ್ಮ ಮನೋಸ್ಥಿತಿಯ ಕುರಿತು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದರು.


ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವ ಅಗತ್ಯತೆ ಎಲ್ಲಾ ಪಕ್ಷದವರಿಗೂ ಇದೆ. ಜನಪ್ರತಿನಿಧಿಗಳ ಜವಾಬ್ದಾರಿ ಇದೇ ಆಗಿದೆ. ಕಾನೂನಿನ ಅಲ್ಪ ಜ್ಞಾನವೂ ಇಲ್ಲದೆ ಮಾತಾಡುವುದು ಬಿಜೆಪಿ ನಾಯಕರಿಗೆ ಶೋಭೆ ತರುವುದಿಲ್ಲ. ಇನ್ನಾದರೂ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಲ್ಲಿ ಯೋಚಿಸಬೇಕಾಗಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಈಗಾಗಲೇ ಉಪಮುಖ್ಯಮಂತ್ರಿ ಅವರು ಸರ್ವಪಕ್ಷಗಳ ನಾಯಕರ ಸಭೆ ಕರೆಯುವುದಾಗಿ ಹೇಳಿದ್ದಾರೆ. ಹೀಗಿರುವಾಗ ಹಿಂದೂ ಯುವಕರ ಸಾವಿನಲ್ಲಿ ರಾಜಕೀಯ ಮಾಡುವುದನ್ನು ಬಿಡಲಿ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಿಥುನ್ ರೈ, ಪದ್ಮರಾಜ್ ಆರ್., ಇನಾಯತ್ ಅಲಿ, ಹರೀಶ್ ಕುಮಾರ್, ಶಾಲೆಟ್ ಪಿಂಟೋ, ಜಿ. ಎ. ಬಾವ, ಲಾರೆನ್ಸ್ ಡಿಸೋಜ, ಸುಹಾನ್ ಆಳ್ವ, , ಶಾಹುಲ್ ಹಮೀದ್, ವಿಕಾಸ್, ಶುಭೋದ್ ಆಳ್ವ, ಕೃಷ್ಣ ಶೆಟ್ಟಿ, ಬಶೀರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು