ಇತ್ತೀಚಿನ ಸುದ್ದಿ
ಕೋಮು ದ್ವೇಷ ಹಬ್ಬಿಸುತ್ತಿರುವ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ದ ಕ್ರಮ ಕೈಗೊಳ್ಳಿ: ಎನ್ ಎಸ್ ಯುಐ ಆಗ್ರಹ
05/05/2025, 19:49

ಮಂಗಳೂರು(reporterkarnataka.com):ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದಕ್ಕೆ ಶಾಸಕ ಹರೀಶ್ ಪೂಂಜ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ಎನ್ ಎಸ್ ಯುಐ ದೂರು ನೀಡಿದೆ.
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದಕ್ಕೆ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪರವಾಗಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಮನವಿ ಸಲ್ಲಿಸಿದ್ದಾರೆ.