10:11 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಅಕ್ರಮ ಗಣಿಗಾರಿಕೆ: ತಿರುಪತಿ ತಿಮ್ಮಪ್ಪನಿಗೆ 45 ಕೋಟಿ ರೂ.ಗಳ ಕಿರೀಟ ಸಮರ್ಪಿಸಿದ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

06/05/2025, 21:30

ಹೈದರಾಬಾದ್(reporterkarnataka.com): ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ
884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಗಂಗಾವತಿ ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
13 ವರ್ಷಗಳ ದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಐಪಿಸಿ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆ.13(2) ಜೊತೆಗೆ 13(1)(d) ಅಡಿ ಜನಾರ್ದನ ರೆಡ್ಡಿ ಮೇಲಿನ
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ.
ಜನಾರ್ದನ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆ ಹಾಗೂ ಹಾಲಿ ಶಾಸಕ ಎಂಬುದನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ನ್ಯಾಯಾಲಯಕ್ಕೆ
ಮನವಿ ಮಾಡಿದ್ದರು. ಆದರೆ, ಸಿಬಿಐ ವಿಶೇಷ ಕೋರ್ಟ್ ಮನವಿಯನ್ನು ತಿರಸ್ಕರಿಸಿದೆ. ಜನಾರ್ದನ ರೆಡ್ಡಿ ಎಸಗಿರುವ ಅಪರಾಧವು ಜೀವಾವಧಿ ಶಿಕ್ಷೆಗೆ ಯೋಗ್ಯವಾದದ್ದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದರಿಂದ ಜನಾರ್ದನ ರೆಡ್ಡಿ ಮತ್ತೆ ಜೈಲು ಸೇರಬೇಕಾಗುತ್ತದೆ.
ಜನಾರ್ದನ ರೆಡ್ಡಿಯವರು ತಿರುಪತಿ ತಿಮ್ಮಪ್ಪನಿಗೆ 45
ಕೋಟಿ ರೂ.ಗಳ ವಜ್ರದ ಕಿರೀಟ ಅರ್ಪಿಸಿರುವುದನ್ನು ಸ್ಮರಿಸಬಹುದು. ಅಪರಾಧ ಎಸಗಿ ಯಾವುದೇ ದೇವರಿಗೆ ಮೊರೆ ಹೋದರೂ ಪ್ರಯೋಜನವಿಲ್ಲ, ಮಾಡಿದ ಕರ್ಮವನ್ನು ಅನುಭವಿಸಲೇ ಬೇಕೆನ್ನುವುದು ತೀರ್ಪಿನಿಂದ ಮತ್ತೊಮ್ಮೆ ಸಾಬೀತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು