5:53 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಲಿಂಗಸಗೂರು: ಚಿತ್ತಾಪೂರ ಗ್ರಾಮಕ್ಕೆ ಕೃಷ್ಣಾ ನದಿ ನೀರು ಕುಡಿಯಲು ಒದಗಿಸಲು ಅಂಬೇಡ್ಕರ್ ಸೇನೆ ಒತ್ತಾಯ

06/05/2025, 21:32

ಶಿವು ರಾಠೋಡ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು.
ಎಂದು ಸಹಾಯಕ ಆಯುಕ್ತರಿಗೆ ಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದರು ಇಡಿ ಕರ್ನಾಟಕ ತುಂಬ ಮಾಧ್ಯಮಗಳಲಿಯು ಸಹ ಪ್ರಸಾರವಾಗಿತ್ತು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಭೇಟಿ ಮಾಡಿದರು. ಆರೋಗ್ಯ ಇಲಾಖೆಯವರು ಬೋರ್ ನೀರು ಕುಡಿಯಲು ಯೋಗ್ಯವಿಲ್ಲದ ನೀರು ಬಳಸಿದರಿಂದ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಚಿತ್ತಾಪೂರ ಗ್ರಾಮಸ್ಥರಿಗೆ ಈ ಬೋರವೇಲ್ ನೀರು ಕುಡಿಯುವುದರಿಂದ ಜನರಿಗೆ ಸಾಕಷ್ಟು ಅನಾರೋಗ್ಯದ ಸಮಸ್ಯೆ ಮಂಡಿನೋವು, ಮುಂತಾದ ಸಮಸ್ಯೆಗಳು ಉಂಟಾಗಿವೆ. ಒಂದು ವರ್ಷ ಕಳೆದರು ಸಹ ಗ್ರಾಮಸ್ಥರಿಗೆ ಇನ್ನೂ ಬೋರವೇಲ್ ನೀರು ಕುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಗ್ರಹಿಸಿದರು.
ಜೆಜೆಎಂ ಮೂಲಕ ಕೊರೆದ ಬೋರವೇಲ್ ನೀರು ಸಹ ಯೋಗ್ಯವಿಲ್ಲ ಕಾಮಗಾರಿಯು ಕಳಪೆಯಾಗಿದ್ದು ಗ್ರಾಮದಲ್ಲಿ ಎಲ್ಲಿ ಅಂದರಲ್ಲಿ ಪೈಪ್ ಲೈನ್ ಹೊಡೆದು ನೀರು ಪೋಲ್ ಆಗುತ್ತಿವೆ. ಗುತ್ತಿಗೆದಾರರು ಕಳಪೆ ಸಾಮಗ್ರಿಗಳನ್ನು ಬಳಸಿದ್ರಿಂದ ನೀರು ಪೋಲಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ತಾಲೂಕು ಅಧ್ಯಕ್ಷ ಗದ್ಯಪ್ಪ ಚಿತ್ತಾಪುರ.
ಅನಿಲ್ ಕುಮಾರ್. ಅಮರೇಶ ಆನೇಹೂಸೂರು ಮತ್ತರರು ಇದರು.

ಇತ್ತೀಚಿನ ಸುದ್ದಿ

ಜಾಹೀರಾತು