4:36 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ನಾಲತವಾಡ ಬಳಿ ಭೀಕರ ರಸ್ತೆ ಅಪಘಾತ: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

07/05/2025, 20:58

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರದಿಂದ ಮುದ್ದೇಬಿಹಾಳ ಕಡೆಗೆ ಸಾಗುತ್ತಿದ್ದ ಸರಕಾರಿ ಬಸ್, ಬುಧವಾರ ಸಂಜೆ ನಾಲತವಾಡ ಗ್ರಾಮದ ಆರೇಶಂಕರ ಕ್ರಾಸ್ ಹತ್ತಿರ ಬೈಕಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯನ್ನು ನಾಲತವಾಡ ಪಟ್ಟಣದ 5ನೇ ವಾರ್ಡಿನ ನಿವಾಸಿ ಸಂಗಪ್ಪ ಬಸಪ್ಪ ಗೌಡೂರ (28) ಎಂದು ಗುರುತಿಸಲಾಗಿದೆ. ಸ್ಥಳೀಯ ಪ.ಪಂಯಲ್ಲಿ ಪೌರ ಕಾರ್ಮಿಕನಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಪರಿಚಯದ ಮಹಿಳೆಯೊಂದಿಗೆ ಬೈಕ್‌ನಲ್ಲಿ ಆರೇಶಂಕರ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಆರೇಶಂಕರ ಕ್ರಾಸ್ ಹತ್ತಿರ, ಮುಂಭಾಗದಿಂದ ಬಂದ ಬಸ್ ಹಠಾತ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸಂಗಪ್ಪ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿ ಜೊತೆಗಿದ್ದ ಮಹಿಳೆಗೆ ಲಘು ಗಾಯಗಳಾಗಿವೆ ಎಂದು ವರದಿಯಾಗಿದೆ.
ಪೊಲೀಸರು ಮುದ್ದೇಬಿಹಾಳ ಪಿಎಸೈ ಸಂಜೀವ ತಿಪ್ಪಾರಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಪರಿಣಾಮ ಗ್ರಾಮದಲ್ಲಿ ಶೋಕ ವಾತಾವರಣ ಮನೆಮಾಡಿದೆ.
ಸೋಮವಾರ ಎರಡು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದರು. ಇದಾದ ಮೇಲೆ ಬುಧವಾರ ಮತ್ತೇ ಈ ಅಪಘಾತ ನಡೆದಿದೆ. ಎರಡು ದಿನಗಳಲ್ಲಿ ನಾಲತವಾಡ ಗ್ರಾಮದ ಮೂರು ಜನರು ದುರ್ಮಣಕ್ಕೆ ಈಡಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು