2:52 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ ಕಂಕಣ ಭಾಗ್ಯ

07/05/2025, 21:02

ದೊಡ್ಡಬಳ್ಳಾಪುರ(reporterkarnataka.com): ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದು, ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳ ಸಾನಿದ್ಯದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ 66 ಜೋಡಿಗಳ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು ಈ ಕಾರ್ಯಕ್ರಮದಲ್ಲಿ ಆಶೀರ್ವಾದ ಮಾಡಲು ಬಂದಿರುವ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತಾ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಈ ಶುಭ ಲಗ್ನ ದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಕ್ಷೇತ್ರದಲ್ಲಿ ಮದುವೆ ಕಾರ್ಯಕ್ರಮ ನಡೆದಿರುವುದು ವಿಶೇಷವಾಗಿದೆ.
ಅಧಿಕಾರಿಗಳು ಮತ್ತು ಪ್ರಾಧಿಕಾರದ ಸದಸ್ಯರು ಉತ್ತಮ ವಾಗಿ ಕಾರ್ಯಕ್ರಮ ಆಯೋಜಿಸಿದ್ದು ನಿಮಗೆ ವಿಶೇಷವಾದ ಧನ್ಯವಾದಗಳನ್ನು ತಿಳಿಸಬೇಕು.
ಮದುವೆಗೆ ಲಕ್ಷಾಂತರ ರೂಗಳನ್ನು ಖರ್ಚು ಮಾಡಿ ಮಾಡುವ ಮದುವೆಗಳಿಗಿಂತ ದೇವರ ಸನ್ನಿದಾನದಲ್ಲಿ ಮಾಡಿರುವ ಈ ಮದುವೆ ಶ್ರೇಷ್ಠವಾಗಿದೆ. ತಮಗೆ ಉತ್ತಮ ಆರೋಗ್ಯ ಭಾಗ್ಯವನ್ನು ದೇವರು ಕರುಣಿಸಲಿ ಎಂದರು.


ನವ ದಂಪತಿಗಳಾದ ತಾವು ಪ್ರೀತಿ ವಾತ್ಸಲ್ಯದಿಂದ ಜೀವನ ಮಾಡಬೇಕು ಮತ್ತು ತಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಂಡು ಉತ್ತಮ ಜೀವನಸಾಗಿಸಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಬಸವರಾಜು, ಸಿಇಒ ಡಾ.ಅನುರಾಧ, ಮಾಜಿ ಶಾಸಕ ವೆಂಕಟರಮಣಯ್ಯ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ರಾಥೊಡ್, ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಮಹೇಶ್, ರವಿ, ಹೇಮಲತಾ ,ಲಕ್ಷ್ಮಾ ನಾಯಕ್ , ಬಯ್ಯಪ್ಪಾ ಸದಸ್ಯರಾದ ಮಂಜುನಾಥ್, ರವಿಸಿದ್ದಪ್ಪ, ಹಾಗೂ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಮುನಿರಾಜು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು