9:13 PM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Yadgiri | ಇಸ್ಪೀಟ್ ಅಡ್ಡೆಯ ಮೇಲೆ ದಾಳಿ: 22 ಮಂದಿ ಬಂಧನ; 86960 ರೂ. ನಗದು ವಶ

08/05/2025, 11:10

ಶಿವು ರಾಠೋಡ ಹುಣಸಗಿ ಯಾದಗಿರಿ
info.reporterkarnataka@gmail.com

ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು 86960 ರೂ. ನಗದು ವಶಪಡಿಸಿಕೊಂಡು
22 ಮಂದಿಯ ಬಂಧಿಸಿದ್ದಾರೆ.
ಪಿಎಸ್ಐ ಅಯ್ಯಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಯಾದಗಿರಿ ಜಿಲ್ಲೆಯ ಎಸ್ ಪಿ ಪೃಥ್ವಿಕ್ ಶಂಕರ್, ಡಿಎಸ್ಪಿ ಜಾವೀದ್ ಇನಾಮ್ದಾರ್ ಅವರ ಹಾಗೂ
ಹುಣಸಗಿ ಸಿಪಿಐ ರವಿಕುಮಾರ ಎಸ್.ಎನ್ ಅವರ ಮಾರ್ಗದರ್ಶನದ ಮೆರೆಗೆ ದಾಳಿ ನಡೆಸಲಾಗಿದೆ.
ಕೊಡೇಕಲ್ ಗ್ರಾಮದ ನಿಜಲಿಂಗಪ್ಪ ಗುಡಿ ಹತ್ತಿರ13 ಜನ ಹಾಗೆ ಸ್ಥಳದಿಂದ ಒಟ್ಟು ನಗದು ಹಣ 58800/- ರೂ. ಮತ್ತು ಕೊಡೇಕಲ್ ಗ್ರಾಮದ ಬಸ್ ನಿಲ್ದಾಣದ ಹತ್ತಿರ 9 ಜನ ಹಾಗೂ ಸ್ಥಳದಿಂದ ನಗದು ಹಣ 28160/-ರೂ, ಜಪ್ತಿ ಮಾಡಲಾಗಿದೆ. ಒಟ್ಟಾರೆಯಾಗಿ 86,960 ಹಣ ಮತ್ತು 22 ಜನ ಇಸ್ಪೇಟ್ ಆಡುತ್ತಿರುವರನ್ನು ಬಂಧಿಸಲಾಗಿದೆ. ಈ ಬಗ್ಗೆ ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ನಂ.64 ಹಾಗೂ 65/2025 ಕಲಂ.87 ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ .

ಇತ್ತೀಚಿನ ಸುದ್ದಿ

ಜಾಹೀರಾತು