12:27 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕಾನೂನು ಸುವ್ಯವಸ್ಥೆ: ಅಧಿಕಾರಿಗಳ ಜತೆ ಸ್ಪೀಕರ್, ಉಸ್ತುವಾರಿ ಸಚಿವರ ಸಭೆ; ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

08/05/2025, 19:32

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ನಂತರ ಸಹಜ ಸ್ಥಿತಿ ಮರುಕಳಿಸಿದ್ದು, ಪ್ರಸಕ್ತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಕುರಿತು ಗುರುವಾರ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಜನರ ಸುರಕ್ಷತೆ ಸರಕಾರದ ಗರಿಷ್ಠ ಆದ್ಯತೆಯಾಗಿದೆ. ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಯಾವುದೇ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಯಾವುದೇ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ ಎಂದು ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಸೂಚಿಸಿದರು. ಜನಸಾಮಾನ್ಯರಲ್ಲಿ ನೆಮ್ಮದಿಯ ವಾತಾವರಣ ಮೂಡಿಸುವುದೇ ಸರಕಾರದ ಆದ್ಯತೆ. ಹೆಚ್ಚುವರಿ ಭದ್ರತೆಯನ್ನು ಇನ್ನೂ ಸ್ವಲ್ಪ ಕಾಲ ಮುಂದುವರಿಸಬೇಕು ಎಂದು ಸಚಿವರು ತಿಳಿಸಿದರು.
ಪ್ರಸ್ತುತ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಪರಿಸ್ಥಿತಿ ಈಗ ಎಂದಿನಂತೆ ಸಹಜ ಸ್ಥಿತಿಗೆ ಮರಳಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳು ಸಂಜೆ ಬಳಿಕ ನಿರಂತರ ರೌಂಡ್ಸ್ ನಲ್ಲಿದ್ದಾರೆ. ಹೊರ ಜಿಲ್ಲೆಯ ಪೊಲೀಸರು ಹಾಗೂ ಕೆ.ಎಸ್.ಆರ್.ಪಿ. ತುಕಡಿಗಳನ್ನು ಹೆಚ್ಚುವರಿ ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಡಿಸಿಪಿ ಸಿದ್ಧಾರ್ಥ ಗೋಯಲ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುವವರ ವಿರುದ್ಧ ನಿಗಾ ಇಡಲಾಗಿದೆ. ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಅಪರಾಧ ಹಿನ್ನಲೆಯುಳ್ಳ ವ್ಯಕ್ತಿಗಳ ಮೇಲೂ ನಿಗಾ ಇಡಲಾಗಿದೆ ಎಂದರು.

ಪೆÇಲೀಸ್ ವರಿಷ್ಠಾಧಿಕಾರಿ ಯತೀಶ್ ಅವರು ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಗಾ ಇಡಲಾಗಿದೆ ಎಂದು ತಿಳಿಸಿದರು.
ವೀಡಿಯೋ ಕಾನ್ಫೆರೆನ್ಸ್ ಮೂಲಕ ನಡೆದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಆನಂದ್ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು