5:34 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Bangalore | ಓಬಳಾಪುರಂ ಅಕ್ರಮ ಗಣಿಗಾರಿಕೆಯಲ್ಲಿ 7 ವರ್ಷ ಜೈಲು ಶಿಕ್ಷೆ: ಜನಾರ್ದನ ರೆಡ್ಡಿ ಶಾಸಕತ್ವ ರದ್ದು

09/05/2025, 19:12

ಬೆಂಗಳೂರು(reporterkarnataka.com): ಓಬಳಾಪುರಂ ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಪ್ರಕರಣದಲ್ಲಿ ಸಿಬಿಐ ಕೋರ್ಟ್ ನಿಂದ 7 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್ ತೀರ್ಪು ನೀಡಿತ್ತು‌. ಕಾನೂನು ಪ್ರಕಾರ 2 ವರ್ಷಕ್ಕಿಂತ ಹೆಚ್ಚು ಕಾಲ ಶಿಕ್ಷೆಗೊಳಗಾದ ಜನಪ್ರತಿನಿಧಿಗಳು ತನ್ನ ಚುನಾಯಿತ ಸ್ಥಾನವನ್ನು ಕಳೆದು ಕೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆ ಕ್ರಮ ಕೈಗೊಂಡಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮೇ 6ರಿಂದ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಶಾಸಕ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಮುಂದಿನ 6 ವರ್ಷಗಳ ಕಾಲ ಜನಾರ್ದನ ರೆಡ್ಡಿ ಅನರ್ಹರಾಗಿದ್ದಾರೆ. ಈ ಅನರ್ಹತೆ ಜನಾರ್ಧನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು