6:42 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಜೀವ ವೈವಿಧ್ಯ ರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದ ಸಸ್ಯ ವಿಜ್ಞಾನಿ ಡಾ.ಸೂರ್ಯಪ್ರಕಾಶ್‌ ಶೆಣೈ ಇನ್ನಿಲ್ಲ

11/05/2025, 20:57

ಮಂಗಳೂರು(reporterkarnataka.com): ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರು ಇಂದು ಬೆಳಿಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದಿಂದ ನಿಧನರಾದರು.
ಪಶ್ಚಿಮ ಘಟ್ಟದ ಸಸ್ಯಸಂಪತ್ತಿಗೆ ಜೀವ ನೀಡುವಂತೆ, ಪಿಲಿಕುಳದ 85 ಎಕರೆ ಪ್ರದೇಶದಲ್ಲಿ ಸ್ಥಾಪಿತವಾಗಿರುವ ‘ಸಸ್ಯಕಾಶಿ’ ಎಂಬ ಸಸ್ಯೋದ್ಯಾನ ನಿರ್ಮಾಣದಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿ, ಬೀಜ ಸಂಗ್ರಹಿಸಿ ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಮತ್ತು ಜೀವವೈವಿಧ್ಯ ರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದರು.
ಅವರು ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಮೊದಲ ಎಂ.ಎಸ್ಸಿ. (1988–90) ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದು, ನಂತರ ಅದೇ ವಿಭಾಗದಿಂದ ಎಂ.ಫಿಲ್ ಹಾಗೂ ಪಿ.ಎಚ್.ಡಿ ಪದವಿಗಳನ್ನು ಗಳಿಸಿದರು. ತಮ್ಮ ಶೋಧನೆಗಳ ಮೂಲಕ ಅನೇಕ ನಶಿಸಿಹೋಗುತ್ತಿರುವ ಹಾಗೂ ಅಪರೂಪದ ಸ್ಥಳೀಯ ಪ್ರಬೇಧದ ಸಸ್ಯಗಳನ್ನು ಪುನಶ್ಚೇತನಗೊಳಿಸಿ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ಅನೇಕ ವೈಜ್ಞಾನಿಕ ಲೇಖನಗಳನ್ನು ಪ್ರಕಟಿಸಿದರು.
ಇಸವಿ 2000ರಲ್ಲಿ INEP ಪ್ರಾಯೋಜಿತ ಸಸ್ಯಕಾಶಿಯ ಸ್ಥಾಪನೆಯಿಂದ ಆರಂಭವಾಗಿ, 2011ರಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಸಹಾಯದಿಂದ ಪಿಲಿಕುಳದ ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಸ್ಥಾಪನೆಗೊಳ್ಳುವವರೆಗೆ ಅವರ ವೃತ್ತಿಪರ ಕಾರ್ಯಕ್ಷೇತ್ರ ಶ್ರೀಮಂತವಾಗಿತ್ತು. ಅವರು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕೇವಲ ಸಂಶೋಧಕನಾಗಿ ಮಾತ್ರವಲ್ಲ, ಮಾರ್ಗದರ್ಶಕನಾಗಿ ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ದೀಪವಾಗಿದ್ದರು.
ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಆಯುರ್ವೇದ ವಿದ್ಯಾರ್ಥಿಗಳಿಗಾಗಿ ಪರಿಸರ ಮತ್ತು ಸಸ್ಯಸಂರಕ್ಷಣೆಯ ಕುರಿತು ಹಲವು ತರಬೇತಿ ಶಿಬಿರಗಳನ್ನು, ಕಾರ್ಯಾಗಾರಗಳನ್ನು ಅವರು ನಡೆಸಿಕೊಟ್ಟಿದ್ದಾರೆ.
ಈ ರೀತಿಯ ವೈಜ್ಞಾನಿಕತೆಯೊಂದಿಗೆ ಮಾನವೀಯತೆಯನ್ನೂ ಹೊಂದಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರ ಅಗಲಿಕೆ ತೀವ್ರ ಶೂನ್ಯವನ್ನು ಸೃಷ್ಟಿಸಿದೆ. ಅವರು ನೀಡಿದ ಕೊಡುಗೆಗಳು ಸದಾ ನಮ್ಮ ನೆನಪಿನಲ್ಲಿ ಜೀವಂತವಾಗಿರುತ್ತವೆ.

ಇತ್ತೀಚಿನ ಸುದ್ದಿ

ಜಾಹೀರಾತು