ಇತ್ತೀಚಿನ ಸುದ್ದಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ ಅಬ್ಬರ: ಕಡೂರು ಬಳಿ ಸಿಡಿಲಿಗೆ ಕುರಿಗಾಯಿ ಬಲಿ
13/05/2025, 20:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಸಿಡಿಲು ಬಡಿದ ಪರಿಣಾಮ ಕುರಿಗಾಯಿಯೊಬ್ಬರು ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ.
ಕಡೂರು ತಾಲೂಕಿನ ಗೆದ್ಲೆಹಳ್ಳಿ ಗ್ರಾಮದಲ್ಲಿ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಲೋಕೇಶಪ್ಪ (48) ಎಂಬವರು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದುರಂತವಾದ ಘಟನೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.