ಇತ್ತೀಚಿನ ಸುದ್ದಿ
ಹುಬ್ಬಳ್ಳಿ ನಗರವನ್ನೇ ಬೆಚ್ಚಿಬೀಳಿಸುವ ಘಟನೆ: 6ನೇ ತರಗತಿ ಬಾಲಕನಿಂದ 9ನೇ ತರಗತಿಯ ವಿದ್ಯಾರ್ಥಿಯ ಭೀಕರ ಕೊಲೆ
13/05/2025, 23:34

ಹುಬ್ಬಳ್ಳಿ(reporterkarnataka.com): ಗುರುಸಿದ್ದೇಶ್ವರ ನಗರದಲ್ಲಿ 6ನೇ ತರಗತಿಯ ವಿದ್ಯಾರ್ಥಿಯೊಬ್ಬ 9ನೇ ತರಗತಿಯ ವಿದ್ಯಾರ್ಥಿಯನ್ನು ಚಾಕು ಇರಿದು ಕೊಲೆ ಮಾಡಿದ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.
ಮಂಗಳವಾರ ಸಂಜೆ ವೇಳೆ ಮಕ್ಕಳು ಆಟವಾಡುತ್ತಿದ್ದಾಗ ಈ ಇಬ್ಬರ ನಡುವೆ ಸ್ವಲ್ಪ ಮಟ್ಟಿನ ಜಗಳ ನಡೆದಿತ್ತು. ಇದರಿಂದ ಕುಪಿತಗೊಂಡ 6ನೇ ತರಗತಿಯ ವಿದ್ಯಾರ್ಥಿ ಮನೆಗೆ ಹೋಗಿ ಚಾಕು ತೆಗೆದುಕೊಂಡು ಬಂದು 9ನೇ ತರಗತಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದಾನೆ. ಮಗ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದದನ್ನು ಕಂಡು ಬೆಚ್ಚಿಬಿದ್ದ ತಾಯಿ, ಆಕೆಯೇ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ 9ನೇ ತರಗತಿ ಬಾಲಕ ಮೃತಪಟ್ಟಿದ್ದಾನೆ.