11:33 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Minister Kharge | ಸೂಫಿ ಸಂತ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಿದೆ: ಸಚಿವ ಪ್ರಿಯಾಂಕ್ ಖರ್ಗೆ

14/05/2025, 00:15

ಕಲಬುರಗಿ(reporterkarnataka.com): ಕಲಬುರಗಿ ಜಿಲ್ಲೆಯಲ್ಲಿ ಸೂಫಿ-ಸಂತ ಪರಂಪರೆಯ ಬೇರುಗಳು ಆಳವಾಗಿವೆ. ಇಷ್ಟೊಂದು ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಖಾಜಾ ಬಂದೇನವಾದ್ ದರ್ಗಾದ ಸಂದಲ್ ಮೆರವಣಿಗೆ ಹಾಗೂ ಉರುಸ್ ಹಿನ್ನೆಲೆಯಲ್ಲಿ ಖಾಜಾ ಬಂದೇನವಾಜ್ ದರ್ಗಾದ ಬಳಿ ಆಯೋಜಿಸಲಾಗಿದ್ದ ಅಖಿಲ ಭಾರತ ಕೈಗಾರಿಕಾ ಪ್ರದರ್ಶನ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು.
ಹಿರಿಯ ಸಜ್ಜಾದ ಅವರ ಮಾರ್ಗದರ್ಶನದಂತೆ ಈಗಿನ ಸಜ್ಜಾದ ಅವರು ಹೋಗುತ್ತಿದ್ದಾರೆ. ಅವರ ಈ ಹೊಸ ಪ್ರಯಾಣದಲ್ಲಿ‌ ನಾವು ಅವರೊಂದಿಗೆ ಇರುತ್ತೇವೆ. ನಾವು ಶರಣಬಸವೇಶ್ವರ ದೇವಾಲಯ, ಬುದ್ದ ವಿಹಾರದಷ್ಟೇ ಖಾಜಾ ಬಂದೇನವಾಜ್ ದರ್ಗಾವನ್ನು ಗೌರವಿಸುತ್ತೇವೆ. ಹಾಗಾಗಿ, ಸಜ್ಜಾದ ಅವರು ನಮ್ಮನ್ನು ಬೇರೆಯವರೆಂದು ಪರಿಗಣಿಸಬೇಕಿಲ್ಲ. ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಲು ಅವರೊಂದಿಗೆ ಸದಾ ಇರುತ್ತೇವೆ ಎಂದರು.

ಖಾಜಾ ಬಂದೇನವಾಜ ದರ್ಗಾದ ಸಜ್ಜಾದ್ ನಶೀನ್ ಸೈಯದ್ ಮೊಹಮ್ಮದ್ ಅಲಿb ಅಲ್ ಹುಸೇನಿ ಸಾಹೇಬ್ ಮಾತನಾಡಿ ಸೂಫಿ ಪರಂಪರೆಯ ಹಿನ್ನೆಲೆಯ ಹಜರತ್ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಕೇವಲ ಭಾರತ ಮಾತ್ರವಲ್ಲ ಪ್ರಪಂಚದಲ್ಲೆಲ್ಲ ಪ್ರಸಿದ್ಧವಾಗಿದೆ. ಈ ಬಗ್ಗೆ ಅಧ್ಯಯನ ನಡೆಸಲು ಕೆನಡಾ ಹಾಗೂ ಇಂಗ್ಲೆಂಡ್ ದೇಶದಿಂದ ಪ್ರವಾಸಿಗರು ಬಂದು ಹೋಗಿದ್ದಾರೆ. ಉರುಸ್ ಆಚರಣೆಗಳು ಬಹಳ ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಉರುಸ್ ಸಂದರ್ಭದಲ್ಲಿ ವ್ಯಾಪಾರಸ್ಥರು ಬಂದು ಇಲ್ಲಿ ಅಂಗಡಿಗಳನ್ನು ಹಾಕುತ್ತಿದ್ದಾರೆ. ಇಲ್ಲಿ ಬರುವ ಎಲ್ಲರಿಗೂ ಶುಭವಾಗಲಿ ಎಂದರು.

ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಮಾತನಾಡಿ ಕಲಬುರಗಿಯ ಈ ನೆಲ ಭ್ರಾತೃತ್ವಕ್ಕೆ ಹೆಸರಾಗಿದೆ. ಸೂಫಿ ಹಾಗೂ ಸಂತ ಪರಂಪರೆಯ ಶರಣಬಸವೇಶ್ವರ ಹಾಗೂ ಖಾಜಾ ಬಂದೇನವಾಜ್ ದರ್ಗಾ ಈ ಭಾಗದ ಎರಡು‌ ಪ್ರಮುಖ ಧಾರ್ಮಿಕ ಕೇಂದ್ರಗಳಾಗಿವೆ. ಎಲ್ಲ ಧರ್ಮದ ಜನರು‌ ಇಲ್ಲಿಗೆ ಬಂದು ದರ್ಶನ ಪಡೆದುಕೊಂಡು ಹೋಗುತ್ತಿದ್ದಾರೆ. ಇದು ಸಹೋದರತೆಯ ಸಂಕೇತವಾಗಿದೆ ಎಂದರು.

ವೇದಿಕೆಯ ಮೇಲೆ ಶಾಸಕಿ‌ ಕನೀಜ್ ಫಾತಿಮಾ, ಸೈದಲ್ ಹುಸೇನ್ ಸಾಬ್, ಮಹಜರ್ ಆಲಂ ಖಾನ್ ಸೇರಿದಂತೆ ಹಲವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು