4:25 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ; 5300 ಕೋಟಿ ರೂ. ಕೊಡುವುದಾಗಿ ಕೇಂದ್ರ ವಿತ್ತ ಸಚಿವೆ ಘೋಷಿಸಿದರೂ ನಯಾಪೈಸೆ ಕೊಟ್ಟಿಲ್ಲ: ಸಿಎಂ

14/05/2025, 17:36

*ರಾಜ್ಯದ ಸಂಸದರು, ರಾಜ್ಯ ಸಭಾ ಸದಸ್ಯರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬಾರದು: ಸಿಎಂ*

*ಎರಡು ವರ್ಷದಲ್ಲಿ ಒಮ್ಮೆಯೂ ರಾಜ್ಯದ ಪರವಾಗಿ ಸಂಸದರು ಮಾತಾಡಲಿಲ್ಲವಲ್ಲ ಏಕೆ: ಸಿಎಂ ಪ್ರಶ್ನೆ*

*ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ: ಸಭೆಗೆ ಮಾಹಿತಿ ನೀಡಿದ ಅಧಿಕಾರಿಗಳು: ಕೇಂದ್ರಕ್ಕೆ ಇದನ್ನೂ ಏಕೆ ಕೊಡಲಾಗುತ್ತಿಲ್ಲ: ಪ್ರಶ್ನಿಸಿದ ಸಿಎಂ*

*ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ: ಸಿಎಂ*

*ಕೇಂದ್ರಕ್ಕೆ ರಾಜ್ಯ ಸರ್ಕಾರದಿಂದ ಬರೆದ ಪತ್ರಗಳ ಮಾಹಿತಿ ಜೊತೆಗೆ ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದ ಸಿಎಂ*

*ಕೇಂದ್ರದ ಯೋಜನೆಗಳಿಗೆ ಕೇಂದ್ರದಿಂದ ಬಾರದ ಹಣ: ಸಭೆಯಲ್ಲಿ ಸಿಎಂ ಅಸಮಾಧಾನ*


ಬೆಂಗಳೂರು(reporterkarnataka.com):
ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು ಎಂದರು.


ಕೇಂದ್ರ ಸರ್ಕಾರಕ್ಕೆ , ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರ್ಕಾರದಿಂದ ಮೇಲಿಙದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ , ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದರು.
15ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ.
ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಸಿಎಂ ಟೀಕಿಸಿದರು.
ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತಾರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಸಿಎಂ ತಿಳಿಸಿದರು.
ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು