6:37 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ನಾಮ ನಿರ್ದೇಶನ

14/05/2025, 23:30

ನವದೆಹಲಿ(reporterkarnataka.com): ಸಂವಿಧಾನದ ಹತ್ತನೇ ಅನುಸೂಚಿಯಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಶೇಷ ಅಂದರೆ ಈ ರಾಷ್ಟ್ರೀಯ ಸಮಿತಿಯಲ್ಲಿ ವಿವಿಧ ರಾಜ್ಯಗಳ ಕೇವಲ 4 ಮಂದಿ ಮಾತ್ರ ಸ್ಪೀಕರ್ ಗಳಿದ್ದು, ಕರ್ನಾಟಕ ಮತ್ತು ಅದರಲ್ಲೂ ಮಂಗಳೂರು (ಉಳ್ಳಾಲ) ಕ್ಷೇತ್ರದ ಜನತೆಗೆ ಇದೊಂದು ಹೆಮ್ಮೆ ಮತ್ತು ಸಂತೋಷದ ಸುದ್ದಿಯಾಗಿದೆ.
ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸೇರಿದಂತೆ ಈ ಮೂವರು ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದಾರೆ. ಕರ್ನಾಟಕ ವಿಧಾನಸಭೆಗೆ ಚುರುಕು ಮುಟ್ಟಿಸಿ ಅಮೂಲಾಗ್ರ ಬದಲಾವಣೆ ತಂದಿರುವ ಯು.ಟಿ.ಖಾದರ್ ಅವರಿಗೆ ಈ ಸ್ಥಾನ ಅರ್ಹವಾಗಿಯೇ ಸಂದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು