1:17 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ ಸಿಬ್ಬಂದಿಗಳ ಕಾರ್ಯಾಚರಣೆ

15/05/2025, 16:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮರ ಕಡಿಯುವ ಸಂದರ್ಭದಲ್ಲಿ ಕೊಂಬೆ ಮುರಿದು ಎರಡು ಕೊಂಬೆಗಳ ಮಧ್ಯೆ ಅಪಾಯಕಾರಿ ಸ್ಥಿತಿಯಲ್ಲಿ
ಸಿಲುಕಿ ಒದ್ದಾಡುತ್ತಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.


ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ದೇವಸ್ಥಾನಕ್ಕೆ ಸಂಬಂಧಿಸಿದ ಹುಣಸೇ ಮರವನ್ನು ಕಡಿಯುವ ಸಂದರ್ಭ ಭಯಾನಕ ಘಟನೆ ಸಂಭವಿಸಿದೆ. ಮರದ ಮೇಲೆ ಹತ್ತಿ ಕೆಲಸ ಮಾಡುತ್ತಿದ್ದ ಸಯ್ಯದ್ ಎಂಬ ವ್ಯಕ್ತಿ, ಮರದ ಎರಡು ಕೊಂಬೆಗಳ ಮಧ್ಯೆ ಏಕಾಏಕಿ ಮುರಿದು ಬಿದ್ದ ಕೊಂಬೆಯಲ್ಲಿ ಸಿಲುಕಿಕೊಂಡಿದ್ದರು.
ಮರದ ತುದಿಯಲ್ಲಿ ಸಿಲುಕಿಕೊಂಡು ತಾಸಿಗೂ ಹೆಚ್ಚು ಹೊತ್ತು ನರಳಾಡುತ್ತಿದ್ದರು. ನಂತರ ಅಗ್ನಿಶಾಮಕ ದಳದ ನೆರವಿನಿಂದ ರಕ್ಷಣಾ ಕಾರ್ಯ ನಡೆಯಿತು. ಸಯ್ಯದ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲು ಮತ್ತು ಬೆನ್ನಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣ ಕಡೂರು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು