5:27 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಡಲ ನಗರಿ ಮಂಗಳೂರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು: ಪ್ರಜಾ ಸೌಧ ಉದ್ಘಾಟನೆ

16/05/2025, 12:06

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ದಂಡು ಇಂದು ನಗರಕ್ಕೆ ಆಗಮಿಸಲಿದೆ.
ಇಂದು ಮಧ್ಯಾಹ್ನ 3:20ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮುಖ್ಯಮಂತ್ರಿ ಜತೆ ಕಂದಾಯ ಸಚಿವ ಕೃಷ್ಣಭೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಆಗಮಿಸುವರು. ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಈಗಾಗಲೇ ನಗರಕ್ಕೆ ಆಗಮಿಸಿದ್ದಾರೆ. ನಗರದ ಕದ್ರಿ ಪಾರ್ಕ್ ನಲ್ಲಿ 3 ದಿನಗಳ ಕಾಲ ನಡೆಯಲಿರುವ ಮಾವು ಮೇಳವನ್ನು ಅವರು ಉದ್ಘಾಟಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲು ನಗರದ ಉರ್ವಾ ಮಾರ್ಕೆಟ್‍ನಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ. ನಂತರ ಸಂಜೆ 4:15 ಕ್ಕೆ ಪಡೀಲ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನೂತನ ಕಚೇರಿ “ಪ್ರಜಾಸೌಧ” ಉದ್ಘಾಟನೆ ನರೆವೇರಿಸಲಿದ್ದಾರೆ. ಐತಿಹಾಸಿಕ ದರ್ಖಾಸ್ತು ಪೋಡಿ ಅಭಿಯಾನದ ಅಂಗವಾಗಿ 8000 ಮಂದಿಗೆ ಆರ್.ಟಿ.ಸಿ ವಿತರಣೆ ಮಾಡಲಿದ್ದಾರೆ. ನಂತರ ಗುರುಪುರ ನಾಡಕಚೇರಿ ಉದ್ಘಾಟನೆ, ಸಣ್ಣ ನೀರಾವರಿ ಇಲಾಖೆ ಕಛೇರಿ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ, ವಿವಿಧ ಸರಕಾರಿ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6:30ಕ್ಕೆ 5 ವರ್ಷಗಳಿಗೊಮ್ಮೆ ನಡೆಯುವ ಸೈಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾತ್ರಿ 8:15ಕ್ಕೆ ಮುಖ್ಯಮಂತ್ರಿಗಳು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು