3:30 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದರ್ಗಾಗಳಿಗೆ ಜಾತಿ, ಧರ್ಮದ ಮಿತಿ ಇಲ್ಲ: ಉಳ್ಳಾಲ ದರ್ಗಾದ 22ನೇ ಪಂಚ ವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಸಿಎಂ

16/05/2025, 22:30

ಮಂಗಳೂರು(reporterkarnataka.com): ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಉರೂಸ್ ಮಹೋತ್ಸವದಲ್ಲಿ ಮಾತನಾಡಿದರು.
ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ‌ ಎಂದರು.
ದೇಶದಲ್ಲಿ ಅನೇಕ ಸೂಫಿ, ಸಾಧು, ಸಂತರು, ಸಾಮಾಜಿಕ ಹರಿಕಾರರು ಬಂದು ಹೋಗಿದ್ದಾರೆ. ಇವರೆಲ್ಲರೂ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು. ಆದ್ದರಿಂದ ನಾವು ಮಾನವೀಯ ನೆಲೆಯಲ್ಲಿ ಸಮಾಜವನ್ನು ಬೆಸೆಯಬೇಕು ಎಂದು ಅವರು ನುಡಿದರು.
ಉಳ್ಳಾಲ ದರ್ಗಾಕ್ಕೆ ಜಾತಿ, ಧರ್ಮದ ಮಿತಿ ಇಲ್ಲ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ದರ್ಗಾ ಎಂದರು.
ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಸರ್ವ ಧರ್ಮ, ಸರ್ವ ಜಾತಿಯವರಿಗೆ ಸಲ್ಲುವಂಥವು ಎಂದು ಸಿಎಂ ನುಡಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ದಗಾ೯ ಭೇಟಿ ನೀಡಿದರು.
ಸ್ಪೀಕರ್ ಯು.ಟಿ. ಖಾದರ್,
ಉಳ್ಳಾಲ ಖಾಝಿ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಮಾತನಾಡಿದರು.
ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬಿ. ಸುರೇಶ್, ಪೌರಾಡಳಿತ ಸಚಿವ ರಹೀಂ ಖಾನ್, ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ, ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ದಗಾ೯ ಅಧ್ಯಕ್ಷ ಹನೀಫ್ ಹಾಜಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು