7:00 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

Hassan | ಚನ್ನರಾಯಪಟ್ಟಣದ ಮಡಬದಲ್ಲಿ ಜೆಸಿಬಿ ಘರ್ಜನೆ: 15 ಕೋಟಿ ಮೌಲ್ಯದ 27 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

18/05/2025, 12:44

ಹಾಸನ(reporterkarnataka.com): ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಅರಣ್ಯಾಧಿಕಾರಿಗಳು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಬಾಗೂರು ಹೋಬಳಿಯ ಮಡಬ ಗ್ರಾಮದಲ್ಲಿ 27 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿಸಿದ್ದಾರೆ.
ಮಡಬ ಗ್ರಾಮದ ಸರ್ವೆ ನಂ. 27ರಲ್ಲಿ ಸುಮಾರು 10-15 ಕೋಟಿ ರೂ. ಬೆಲೆ ಬಾಳುವ 26 ಎಕರೆ 33 ಗುಂಟೆ ಅರಣ್ಯ ಜಮೀನನ್ನು ಕೆಲವರು ಒತ್ತುವರಿ ಮಾಡಿ, ಇಲ್ಲಿದ್ದ ಮರಗಳನ್ನು ಕಡಿದು ತೋಟ ಮಾಡುವ ದುಸ್ಸಾಹಸ ಮಾಡಿದ್ದರು. ಈ ಬಗ್ಗೆ ಕಚೇರಿಗೆ ಬಂದ ದೂರು ಆಧರಿಸಿ ಈಶ್ವರ ಖಂಡ್ರೆ, ಕಾನೂನು ರೀತ್ಯ ಕ್ರಮ ಜರುಗಿಸುವಂತೆ ಕಳೆದ ಅಕ್ಟೋಬರ್ 23ರಂದು ಸ್ಪಷ್ಟ ಸೂಚನೆ ನೀಡಿದ್ದರು.

ಸದರಿ ಜಮೀನು ಮೀಸಲು ಅರಣ್ಯವಾಗಿದ್ದು, ಅರಣ್ಯ ಒತ್ತುವರಿ ಮಾಡಿ ಮರ, ಗಿಡ ನಾಶ ಮಾಡಿ, ತೋಟ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ, ಇಂದು ಬೆಳಗ್ಗೆ ಜೆಸಿಬಿಯೊಂದಿಗೆ ಸ್ಥಳಕ್ಕೆ ತೆರಳಿ, ಅರಣ್ಯ ಭೂಮಿ ತೆರವು ಮಾಡಿ, ಸ್ಥಳೀಯ ಪ್ರಬೇಧದ ಸಸಿಗಳನ್ನು ನೆಟ್ಟು, ಫಲಕ ಹಾಕಿದ್ದಾರೆ.
*ಖಂಡ್ರೆ ಕ್ರಮಕ್ಕೆ ಗ್ರಾಮಸ್ಥರ ಮೆಚ್ಚುಗೆ:*
ಕೆಲವು ವರ್ಷಗಳಿಂದ ಜಿಲ್ಲೆಯಲ್ಲಿ ಶುಂಠಿ ಬೆಳೆಯುವ ಹೆಸರಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿಕೊಂಡು, ಅರಣ್ಯ ಭೂಮಿ ಕಬಳಿಸಿ, ಬೆಲೆ ಬಾಳುವ ಮರ ಕಡಿದು ನಂತರ ತೋಟ ಮಾಡುತ್ತಿದ್ದಾರೆ. ಕಂದಾಯ ಇಲಾಖೆಯ ಕೆಲವು ಅಧಿಕಾರಿಗಳು ಅರಣ್ಯ ಭೂಮಿಯನ್ನು ಅಕ್ರಮ ಮಂಜೂರಾತಿ ಮಾಡುತ್ತಿದ್ದಾರೆ. ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾದ ಮೇಲೆ ಇಂತಹ ಅಕ್ರಮಗಳಿಗೆ ಕಡಿವಾಣ ಬಿದ್ದಿದೆ ಎಂದು ತಿಳಿಸಿದ್ದಾರೆ.
*ಎಚ್ಚರಿಕೆಯ ಗಂಟೆ:*
ಅರಣ್ಯ ಭೂಮಿಯನ್ನು ಮನಸೋಇಚ್ಛೆ ಒತ್ತುವರಿ ಮಾಡಿ ತೆಂಗು, ಕಾಫಿ ಮತ್ತು ಅಡಿಕೆ ತೋಟ ಮಾಡುತ್ತಿದ್ದವರಿಗೆ ಮಡಬ ಅರಣ್ಯ ತೆರವು ಎಚ್ಚರಿಕೆಯ ಗಂಟೆಯಾಗಿದೆ. ಇಂದಿನ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಳುಕೊಂಡಲ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಮತ್ತಿತರರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು