1:07 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

HDK | ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರಕಾರ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

19/05/2025, 14:44

ನವದೆಹಲಿ(reporterkarnataka.com): ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಮಳೆ ಅನಾಹುತಕ್ಕೆ ಸಿಕ್ಕಿ ನಲುಗುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಂಗ್ರಹ ಆಗುತ್ತಿರುವ ಆದಾಯ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ! ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು! ವಾರಕ್ಕೊಮ್ಮೆ ತೆರಿಗೆ ಬರೆ, ದರ ಏರಿಕೆ! ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ? ಮನಸೋಇಚ್ಛೆ ಒಡೆದು ಬಡಿದು ನುಂಗಲು!? ನಾಡು ಎಂದರೆ ಕಲ್ಲು ಬಂಡೆಗಳಲ್ಲ,
ನಾಡು ಎಂದರೆ ಮನುಷ್ಯರು ಎಂದು ನಗರದ ಉಸ್ತುವಾರಿ ಹೊಂದಿರುವವರ ವಿರುದ್ಧ ಕೇಂದ್ರ ಸಚಿವರು ಹರಿಹಾಯ್ದಿದ್ದಾರೆ.
ಕೆರೆಯ ನೀರನು ಕೆರೆಗೆ ಚೆಲ್ಲುತ್ತಿಲ್ಲವೇಕೆ?
ಕೆರೆ ನೀರಿಗೆ ಕಮೀಷನ್ ಕೋಡಿ ಬಿದ್ದಿದೆ!
ತೆರಿಗೆ ಥೈಲಿ, ಬೆಲೆ ಸುಲಿಗೆ ಹಣವೆಲ್ಲಿ? ಜಾಹೀರಾತುಗಳಲ್ಲಿ ಬಣ್ಣಬಣ್ಣವಾಗಿ ಕಾಣುವ ಬೆಂಗಳೂರು, ನೈಜವಾಗಿ ನಿಟ್ಟುಸಿರು ಬಿಡುತ್ತಿದೆ. ಏಕೆ? ಬರುತ್ತಿರುವ ಆದಾಯ ಎಲ್ಲಿ ಹೋಗುತ್ತಿದೆ?
ನಗರ ಜನರ ಬೆವರಿನ ಹಣ ಏನೇನಾಗುತ್ತಿದೆ?
ಕಲೆಕ್ಷನ್ ಎಷ್ಟು? ವೆಚ್ಚ ಎಷ್ಟು? ಸ್ವಾಹಾ ಎಷ್ಟು? ಎಂದು ಅವರು ಪ್ರಶ್ನಿಸಿದ್ದಾರೆ.
ಗುಂಡಿ ಮುಚ್ಚಲು ಗತಿ ಇಲ್ಲ. ಚರಂಡಿ ಕಸ ಎತ್ತಲು ದಿಕ್ಕಿಲ್ಲ. ನಿತ್ಯವೂ ಗುದ್ದಲಿಪೂಜೆ, ಶಂಕುಸ್ಥಾಪನೆ!! ಹೊಸ ಶೀಶೆ, ಹಳೇ ಮದ್ಯ.ಹಳೇ ಕಾಮಗಾರಿ, ಹೊಸ ಹೊಸ ಬಿಲ್ಲು! ಗ್ರೇಟರ್ ಬೆಂಗಳೂರು ಅಲ್ಲ,
ಲೂಟರ್’ಗಳ ಬೆಂಗಳೂರು! ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು