5:10 PM Monday19 - May 2025
ಬ್ರೇಕಿಂಗ್ ನ್ಯೂಸ್
HDK | ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರಕಾರ… ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧಾ ಕೂಟ ; ಕೆ.ಎಮ್.ಸಿ. ಮಣಿಪಾಲ್ ತಂಡಕ್ಕೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ 2025 ಪ್ರಶಸ್ತಿ

19/05/2025, 15:11

ಮಂಗಳೂರು(reporterkarnataka.com)

ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 4ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ 2025 ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕೂಟದಲ್ಲಿ ಕೆ.ಎಮ್.ಸಿ. ಮಣಿಪಾಲ್ ತಂಡವನ್ನು ಪ್ರತಿನಿಧಿಸಿದ ಡಾ. ಅದಿಥಿ ರಾವ್ ಮತ್ತು ಡಾ. ಸಾಯಿ ಭವಾನಿ ರೆಡ್ಡಿ ಪ್ರಥಮ ಸ್ಥಾನ ಗಳಿಸಿ ಮೆಡಿಕ್ವಿಜ್ ಪ್ರಶಸ್ತಿ ಪಡೆದರು. ಕಣಚೂರು ವೈದ್ಯಕೀಯ ಕಾಲೇಜನ್ನು ಪ್ರತಿನಿಧಿಸಿದ ಡಾ. ವಿನಾಯಕ್ ಎಸ್.ಕೆ. ಮತ್ತು ಡಾ. ರಾಘವೇಂದ್ರ ಡಿ. ತಂಡವು ದ್ವಿತೀಯ ಸ್ಥಾನ, ತೃತೀಯ ಸ್ಥಾನವನ್ನು ನಗರದ ಏ.ಜೆ. ವ್ಯದ್ಯಕೀಯ ಕಾಲೇಜಿನ ಡಾ. ವರುಣ್ ಶೆಟ್ಟಿ ಮತ್ತು ಡಾ. ಅಭಿನ್ ರೈ ಗಳಿಸಿತು.

ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಡಾ. ಮೊಹಮ್ಮದ್ ಇಸ್ಮಯಿಲ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು “ವೈದ್ಯಕೀಯ ಶಿಕ್ಷಣ ವಿಧ್ಯಾರ್ಥಿಗಳು ಶೈಕ್ಷಣಿಕ ಸ್ಪರ್ಧಾಕೂಟದಲ್ಲಿ ಪಾಲ್ಗೊಂಡು ತಮ್ಮ ಶೈಕ್ಷಣಿಕ ಜ್ಞಾನವನ್ನು ವೃದ್ಧಿಸಿದರೆ ಭವಿಷ್ಯದ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು” ಎಂದು ಸಲಹೆ ನೀಡಿ ಸ್ಪರ್ಧಾ ವಿಜೇತರ ಸಾಧನೆಯನ್ನು ಪ್ರಶಂಸಿಸಿ ಪ್ರಶಸ್ತಿ, ಆಕರ್ಷಕ ಬಹುಮಾನ ಮತ್ತು ಪ್ರಶಸ್ತಿ ಪ್ರಮಾಣ ಪತ್ರವನ್ನು ಪ್ರದಾನ ಮಾಡಿ ಅಭಿನಂದಿಸಿದರು.

ಕಣಚೂರು ವೈದ್ಯಕೀಯ ಶಿಕ್ಷಣ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಡಾ. ಶಹನವಾಜ್ ಮಾಣಿಪ್ಪಾಡಿ ಮತ್ತು ಕಣಚೂರು ವೈದ್ಯಕೀಯ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ಶೆಟ್ಟಿ ಮತ್ತು ಸಲಹಾ ಸಮಿತಿಯ ಸದಸ್ಯ ಪ್ರೊ. ಡಾ. ಎಂ.ವಿ. ಪ್ರಭು ಉಪಸ್ಥಿತರಿದ್ದರು. ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಡಾ. ದೇವದಾಸ್ ರೈರವರು ಸ್ಪರ್ಧಾಕೂಟವನ್ನು ನಿರೂಪಿಸಿದರು.

ಅವಿಭಾಜಿತ ದ.ಕ. ಜಿಲ್ಲೆಯ ವಿವಿಧ ವೈದ್ಯಕೀಯ ಶಿಕ್ಷಣ ಕಾಲೇಜಿನ 28 ತಂಡಗಳು ನಿರ್ಣಾಯಕ ಮತ್ತು ಅಂತಿಮ ಸುತ್ತಿಗೆ ಪ್ರವೇಶ ಪಡೆದಿದ್ದವು.

ಪ್ರೊ. ಡಾ. ದೇವದಾಸ್ ರೈ ಸ್ವಾಗತಿಸಿ ಸ್ಪರ್ಧಾಕೂಟದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ಮೊಹಮ್ಮದ್ ಶಹಾದ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಎಂ.ವಿ. ಮಲ್ಯರವರು ಬಹುಮಾನಗಳನ್ನು ಪ್ರಯೋಜಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು