8:43 PM Monday19 - May 2025
ಬ್ರೇಕಿಂಗ್ ನ್ಯೂಸ್
ಫಲಾನುಭವಿಗಳ ನೋಡಲು ಬಿಜೆಪಿ ನಾಯಕರುಗಳೇ ಬನ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಹ್ವಾನ Karnataka | ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ… HDK | ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರಕಾರ… ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್

ಇತ್ತೀಚಿನ ಸುದ್ದಿ

Karnataka | ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಸರಕಾರ ಚಿಂತನೆ

19/05/2025, 19:56

ಹೊಸಪೇಟೆ(reporterkarnataka.com): ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು ಹೇಳಿದರು.
ಇಂದು ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವಾವಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ನೂತನ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

*ಉತ್ತಮ ಜಾಗ ಮಂಜೂರು:*
ಕಮಲಾಪುರದ ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಉತ್ತಮ ಜಾಗವನ್ನು ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಏಕರೆ ಜಾಗ ಮಂಜೂರಾಗಿದ್ದು ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

*ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ:*
ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. 12 ಮೀಟರ್‌ ನಾನೋಸೀಮ್ ಡೋಮ್‌‌ ತಾರಾಲಯ ಹಾಗೆಯೇ ಅತ್ಯಾಧುನಿಕ ಸೌಲಭ್ಯಗಳನು ಹೊಂದಿರುವ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕ ಭಾಗದ ಯುವ ಜನರಲ್ಲಿ ವೈಜ್ಞಾನಿಕ ಮನೋಭಾವ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲಾಗುತ್ತಿದೆ. ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿ ಉತ್ತಮ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಎನ್‌ ಎಸ್‌ ಭೋಸರಾಜು ತಿಳಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್‌ನ) ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ, ನಮ್ಮ ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವೂ ಆಗಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಸ್ಥಾಪಿಸಲು ಉದ್ದೇಶಿಸಿರುವ ನೂತನ ವಿಜ್ಞಾನ ಕೇಂದ್ರದ ಸ್ಥಳವನ್ನು ಇಂದು ಭೇಟಿನೀಡಿ, ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಯಿತು.
ಈ ಸಂದರ್ಭದಲ್ಲಿ, ವಿಜ್ಞಾನ ತಂತ್ರಜ್ಞಾನ ಇಲಾಖೆಯ ನಿರ್ದೇಶಕರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು