5:31 PM Tuesday20 - May 2025
ಬ್ರೇಕಿಂಗ್ ನ್ಯೂಸ್
Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ… Karnataka CM | ಬೆಂಗಳೂರಿನಲ್ಲಿ ಮಳೆ ಹಾನಿ: ಮೇ 21ರಂದು ಇಡೀ ದಿನ… GBA | ಬೆಂಗಳೂರಿಗೆ ಭಾರಿ ಮಳೆಯಿಂದ ಹಾನಿ: ವಾರ್ ರೂಮ್‌ನಲ್ಲಿ ಮಾಹಿತಿ ಪಡೆದ… ಫಲಾನುಭವಿಗಳ ನೋಡಲು ಬಿಜೆಪಿ ನಾಯಕರುಗಳೇ ಬನ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಹ್ವಾನ Karnataka | ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ… HDK | ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ರಾಜ್ಯ ಸರಕಾರ… ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್…

ಇತ್ತೀಚಿನ ಸುದ್ದಿ

Hospete | 5 ಗ್ಯಾರಂಟಿಗಳ ಜತೆಗೆ 142 ಭರವಸೆಗಳನ್ನು 2 ವರ್ಷಗಳಲ್ಲಿ ಪೂರೈಸಿದ್ದೇವೆ: ಸಿಎಂ ಸಿದ್ದರಾಮಯ್ಯ

20/05/2025, 16:57

Hospete | 5 ಗ್ಯಾರಂಟಿಗಳ ಜತೆಗೆ 142 ಭರವಸೆಗಳನ್ನು 2
ವರ್ಷಗಳಲ್ಲಿ ಪೂರೈಸಿದ್ದೇವೆ: ಸಿಎಂ ಸಿದ್ದರಾಮಯ್ಯ

*ನಾವು ಕೊಟ್ಟ ಭರವಸೆಗಳಲ್ಲಿ 142 ಭರವಸೆಗಳನ್ನು ಎರಡು ವರ್ಷದಲ್ಲಿ ಪೂರೈಸಿದ್ದೇವೆ, ಉಳಿದವುಗಳನ್ನು ಮುಂದಿನ ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿ.ಎಂ ಭರವಸೆ*

*111111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ ವಿತರಿಸಿದ ಸಿಎಂ*

ಹೊಸಪೇಟೆ(reporterkarnataka.com): ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಹೊಸಪೇಟೆಯಲ್ಲಿ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.


ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

*ಸರ್ವ ಜನಾಂಗದ ಶಾಂತಿಯ ತೋಟ:*
ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.
ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದು ಅವರು ನುಡಿದರು.
ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15 ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದರು.

*ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ:*
ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದು ಅವರು ನುಡಿದರು.

*ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಭೀತಾಗಿದೆ: ಸಿಎಂ*
ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.
1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯ ರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.

*ಚಿನ್ನದ ಬೆಲೆ ಈಗ ಎಷ್ಟಿದೆ:?*
2014 ರಲ್ಲಿ 10000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ.
ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು.
ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು