1:12 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಜಾನಪದ ವಿದ್ವಾಂಸ ಕ. ರಾ. ಕೃಷ್ಣಸ್ವಾಮಿ ನಿಧನ: ನಾಳೆ ಸ್ವಗ್ರಾಮ ಕದಬಹಳ್ಳಿಯಲ್ಲಿ ಅಂತ್ಯಕ್ರಿಯೆ

22/05/2021, 17:14


ಮಂಡ್ಯ(reporterkarnataka news)

ಜಾನಪದ ವಿದ್ವಾಂಸ,  ನಾಗಮಂಗಲ ತಾಲ್ಲೂಕಿನ ಎರಡನೇ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕ ರಾ ಕೃ (ಕ ರಾ ಕೃಷ್ಣಸ್ವಾಮಿ) ಶನಿವಾರ ಬೆಂಗಳೂರಿನ ಮಹಾಲಕ್ಷ್ಮಿ ಪುರಂನಲ್ಲಿರುವ ಅವರ ನಿವಾಸದಲ್ಲಿ ನಿಧನ ಹೊಂದಿದರು.

1936 ಅಕ್ಟೋಬರ್ 16ರಂದು ರಾಮಣ್ಣ ಗೌಡ ಮತ್ತು ಚನ್ನಮ್ಮ ದಂಪತಿಗೆ ನಾಗಮಂಗಲ ತಾಲ್ಲೂಕಿನ ಕದಬಹಳ್ಳಿಯಲ್ಲಿ ಜನಿಸಿದರು.

 ಮೈಸೂರಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿ, ವಿಶ್ವವಿದ್ಯಾನಿಲಯಗಳಿಗೂ ಮುನ್ನವೇ ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯದಲ್ಲಿ ತೊಡಗಿ 1959ರಲ್ಲಿ “ಜಾನಪದ ಅಕಾಡೆಮಿ” ಸ್ಥಾಪಿಸಿದರು.

 ಅವರ ಸಂಪಾದನಾ ಕೃತಿಗಳು 
೧.ಜಾನಪದ ಪ್ರೇಮಗೀತೆಗಳು
೨.ಜೇನ ಹನಿಗಳು
೩.ಆಯ್ದ ನಾಡ ಹಾಡುಗಳು
೪.ಜನಪ್ರಿಯ ಜಾನಪದ ಗೀತೆಗಳು ಇತ್ಯಾದಿ ಮುವತ್ನಾಲ್ಕುಕ್ಕೂ ಹೆಚ್ಚು ಜಾನಪದ ಕೃತಿಗಳನ್ನು ರಚಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 9-00 ಗಂಟೆಗೆ ಸ್ವಗ್ರಾಮ ಕದಬಹಳ್ಳಿಯಲ್ಲಿ ನಡೆಯಲಿದೆ ಎಂದು ಮೃತರ ಪತ್ನಿ ಲಲಿತಮ್ಮ ತಿಳಿಸಿದ್ದಾರೆ.

 ಮಗಳು ಡಾ. ದೀಪಿಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಮಗ ತುಷಾರ್ ಎಂಬಿಎ ಪದವೀಧರ ನಾಗಿದ್ದು ಸ್ವಂತ ಉದ್ಯೋಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು