9:33 PM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

24/05/2025, 09:00

* ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲ ಹಾಗೂ ಅರ್ಜುನ್ ಜನ್ಯ ಅವರಿಗೆ ಡಿಸಿಎಂ ಪತ್ರ ಬರೆದು ಮನವಿ ಮಾಡಿದ್ದಾರೆ.

* ಕಾವೇರಿ ಪರಂಪರೆ, ಜಲ ಶ್ರೀಮಂತಿಕೆಯನ್ನೊಳಗೊಂಡ ಗೀತ ಸಾಹಿತ್ಯ ರಚನೆಗೆ ಮನವಿ

* ಕಾವೇರಿ ಆರತಿ ಸಂದರ್ಭದಲ್ಲಿ ಆಯ್ಕೆಯಾದ ಹಾಡು ಪ್ರಸಾರ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು(reporterkarnataka.com): ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲ ಹಾಗೂ ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯ ಸರ್ಕಾರವು ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಲಿರುವ ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜೊತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ ವಿದೇಶಗಳಿಗೆ ಹಾಡು ಮತ್ತು ಸಂಗೀತದ ಮೂಲಕ ಸಾರುವ ಹಾಗೂ ಆರತಿಯ ಮಹಿಮೆಯನ್ನು ಮೇಳೈಸುವ ಅದ್ಭುತವಾದ ಸಾಹಿತ್ಯ ಮತ್ತು ಗೀತ ಸಂಯೋಜನೆ ಆಗಬೇಕಿದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.
ರಚನೆಯಾದ ಈ ಗೀತೆಯನ್ನು ಧ್ವನಿ ಸುರಳಿ ರೂಪದಲ್ಲಿ ತಂದು, ಕಾವೇರಿ ಆರತಿ ಸಂದರ್ಭದಲ್ಲಿ ಬರುವ ಭಕ್ತಾದಿಗಳಿಗೆ ಕಣ್ಣು ತುಂಬಿಕೊಳ್ಳುವಂತೆ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ, ಕಾವೇರಿಯ ಮೆರುಗನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆ ಮಾಡುವಂತೆಯೂ, ಆಯ್ಕೆಯಾದ ಗೀತೆಯನ್ನು ಕಾವೇರಿ ಆರತಿ ಸಂದರ್ಭದಲ್ಲಿ ಪ್ರಸಾರ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಈ ಮೂಲಕ ಕಾವೇರಿ ನದಿಯ ಮಹತ್ವವನ್ನು ಸಾಂಸ್ಕೃತಿಕವಾಗಿ ಎತ್ತಿ ಹಿಡಿಯುವ ಮತ್ತು ಭಕ್ತಾದಿಗಳಲ್ಲಿ ಭಕ್ತಿ ಭಾವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು